Versions
KNV ಆಗ ಸಮು ವೇಲನು--ನಾನು ಹೋಗುವದು ಹೇಗೆ? ಸೌಲನು ಅದನ್ನು ಕೇಳಿದರೆ ನನ್ನನ್ನು ಕೊಂದುಹಾಕುವನು ಅಂದನು.
ERVKN ಅದಕ್ಕೆ ಸಮುವೇಲನು, “ನಾನು ಹೊರಟರೆ ಸೌಲನಿಗೆ ಈ ಸುದ್ದಿಯು ತಿಳಿಯುತ್ತದೆ. ಆಗ ಅವನು ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಾನೆ” ಎಂದನು. ಯೆಹೋವನು, “ಬೇತ್ಲೆಹೇಮಿಗೆ ಹೋಗು. ನಿನ್ನೊಡನೆ ಒಂದು ಎಳೆಕರುವನ್ನು ತೆಗೆದುಕೊಂಡು ಹೋಗು. ‘ನಾನು ಯೆಹೋವನಿಗೆ ಯಜ್ಞವನ್ನರ್ಪಿಸಲು ಬಂದಿದ್ದೇನೆ’ ಎಂದು ಹೇಳು.
IRVKN ಅದಕ್ಕೆ ಸಮುವೇಲನು, “ನಾನು ಹೋಗುವುದು ಹೇಗೆ? ಇದು ಸೌಲನಿಗೆ ಗೊತ್ತಾದರೆ ಅವನು ನನ್ನನ್ನು ಕೊಂದುಹಾಕುವನಲ್ಲವೇ” ಎಂದನು. ಅದಕ್ಕೆ ಯೆಹೋವನು, “ನೀನು ಒಂದು ಕರುವನ್ನು ತೆಗೆದುಕೊಂಡು ಹೋಗಿ ಯೆಹೋವನಿಗೋಸ್ಕರ ಯಜ್ಞಮಾಡುವುದಕ್ಕೆ ಬಂದಿದ್ದೇನೆಂದು ಹೇಳಿ ಇಷಯನನ್ನು ಅದಕ್ಕಾಗಿ ಕರೆ.