Versions
KNV ಆಗ ಅರಸನು ನಡುಗುತ್ತಾ ಊರ ಬಾಗಲು ಮೇಲಿರುವ ಕೊಠಡಿಗೆ ಏರಿ ಹೋದನು; ಹೋಗು ವಾಗ ಅತ್ತು--ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ ನಿನಗೆ ಬದಲಾಗಿ ನಾನು ಸತ್ತಿದ್ದರೆ ಉತ್ತಮವಾಗುತ್ತಿತ್ತು. ಅಬ್ಷಾಲೋಮನೇ, ನನ್ನ ಮಗನೇ ನನ್ನ ಮಗನೇ, ಅಂದನು.
ERVKN ಅಬ್ಷಾಲೋಮನು ಸತ್ತಿದ್ದಾನೆಂಬುದು ಆಗ ರಾಜನಿಗೆ ತಿಳಿಯಿತು. ರಾಜನು ಬಹಳ ತಳಮಳಗೊಂಡನು. ಅವನು ನಗರ ದ್ವಾರದಲ್ಲಿದ್ದ ಕೊಠಡಿಗೆ ಹೋಗಿ ಅಲ್ಲಿ ಗೋಳಾಡಿದನು. ಬಳಿಕ ಅಲ್ಲಿಂದ ತನ್ನ ಕೊಠಡಿಗೆ ಹೋಗುತ್ತಾ, “ನನ್ನ ಮಗನೇ, ಅಬ್ಷಾಲೋಮನೇ, ನನ್ನ ಮಗನಾದ ಅಬ್ಷಾಲೋಮನೇ! ನಿನಗೆ ಬದಲಾಗಿ ನಾನು ಸತ್ತಿದ್ದರೆ ಚೆನ್ನಾಗಿತ್ತು. ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ!” ಎಂದು ಗೋಳಾಡಿದನು.
IRVKN ಇದನ್ನು ಕೇಳಿ ಅರಸನು ಎದೆಯೊಡದವನಾಗಿ, “ನನ್ನ ಮಗನೇ, ಅಬ್ಷಾಲೋಮನೇ, ನಿನಗೆ ಬದಲಾಗಿ ನಾನು ಸತ್ತಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು. ಅಬ್ಷಾಲೋಮನೇ! ನನ್ನ ಮಗನೇ, ನನ್ನ ಮಗನೇ!” ಎಂದು ಕೂಗಿ ಅಳುತ್ತಾ ಪಟ್ಟಣದ ಹೆಬ್ಬಾಗಿಲಿನ ಮೇಲಿರುವ ಕೋಣೆಗೆ ಹೋದನು. PE