Versions
KNV ಲೊಚಗುಟ್ಟುವ ಪಿಸುಮಾತಾಡುವ ಮಂತ್ರಗಾರ ರನ್ನೂ ಕಣಿಹೇಳುವವರನ್ನೂ ಹುಡುಕಿರಿ ಎಂದು ಅವರು ನಿಮಗೆ ಹೇಳುವಾಗ ಜನರು ತಮ್ಮ ದೇವರನ್ನೇ ಹುಡುಕುವದಿಲ್ಲವೋ? ಜೀವಿತರಿಗಾಗಿ ಸತ್ತವರಲ್ಲಿ ಹೋಗುವದುಂಟೋ?
ERVKN ಕೆಲವರು, “ಏನು ಮಾಡಬೇಕೆಂದು ಕಣಿಹೇಳುವವರನ್ನೂ ಬೇತಾಳಿಕರನ್ನೂ ವಿಚಾರಿಸು” ಎಂದು ಹೇಳುತ್ತಾರೆ. (ಕಣಿಹೇಳುವವರು ತಾವು ಮಂತ್ರಶಕ್ತಿಯುಳ್ಳವರೆಂದು ಜನರಿಗೆ ತೋರಿಸಲು ಪಕ್ಷಿಗಳು ಮಾಡುವ ಶಬ್ದವನ್ನು ಬಾಯಿಂದ ಮಾಡಿ ತಮಗೆ ರಹಸ್ಯಗಳು ಗೊತ್ತಿವೆ ಎಂದು ತೋರಿಸಿಕೊಳ್ಳುತ್ತಾರೆ.) ನಾನು ಹೇಳುವದೇನೆಂದರೆ, “ಜನರು ಸಹಾಯಕ್ಕಾಗಿ ದೇವರನ್ನೇ ಕೇಳಿಕೊಳ್ಳಬೇಕು. ಆ ಕಣಿಹೇಳುವವರೂ ಬೇತಾಳಿಕರೂ ತಾವು ಏನು ಮಾಡಬೇಕೆಂದು ಸತ್ತವರನ್ನು ವಿಚಾರಿಸುವರು. ಜೀವಿಸುವವರು ಸತ್ತವರನ್ನು ಯಾಕೆ ವಿಚಾರಿಸಬೇಕು?”
IRVKN “ಗುಣಗುಟ್ಟುವ, ಪಿಸುಮಾತನಾಡುವ, ಪ್ರೇತವಿಚಾರಕರನ್ನೂ, ಬೇತಾಳಿಕರನ್ನೂ ಆಶ್ರಯಿಸಿರಿ” ಎಂದು ಒಂದು ವೇಳೆ ನಿಮಗೆ ಹೇಳಾರು, “ಜನರು ತಮ್ಮ ದೇವರನ್ನೇ ಆಶ್ರಯಿಸಬಾರದೋ? ಜೀವಿತರಿಗಾಗಿ ಸತ್ತವರಲ್ಲಿ ವಿಚಾರಿಸುವುದು ಯುಕ್ತವೋ?