Versions
KNV ಒಬ್ಬನು ತನ್ನ ವಸ್ತ್ರದ ಸೆರಗಿನಲ್ಲಿ ಪರಿಶುದ್ಧ ಮಾಂಸವನ್ನು ಹೊತ್ತು, ತನ್ನ ಸೆರಗಿನಿಂದ ರೊಟ್ಟಿಯ ನ್ನಾದರೂ ಬೇಯಿಸಿದ್ದನ್ನಾದರೂ ದ್ರಾಕ್ಷಾರಸವನ್ನಾ ದರೂ ಎಣ್ಣೆಯನ್ನಾದರೂ ಯಾವ ವಿಧದ ಆಹಾರವ ನ್ನಾದರೂ ಮುಟ್ಟಿದರೆ ಅದು ಪರಿಶುದ್ಧವಾಗುವದೋ ಕೇಳು ಅಂದನು. ಯಾಜಕರು--ಇಲ್ಲವೆಂದು ಉತ್ತರ ಕೊಟ್ಟರು.
ERVKN “ಒಬ್ಬನು ತನ್ನ ಬಟ್ಟೆಯ ಸೆರಗಿನಲ್ಲಿ ಮಾಂಸವನ್ನು ಒಯ್ಯುತ್ತಿದ್ದಾನೆಂದು ನೆನಸಿರಿ. ಆ ಮಾಂಸವು ಯಜ್ಞದ ಒಂದು ಭಾಗವಾಗಿದೆ. ಆದುದರಿಂದ ಅದು ಪವಿತ್ರವಾದದ್ದು. ಆ ಬಟ್ಟೆಯು ರೊಟ್ಟಿಯನ್ನಾಗಲಿ ಅಡಿಗೆ ಮಾಡಿದ ಆಹಾರವಾಗಲಿ ದ್ರಾಕ್ಷಾರಸವನ್ನಾಗಲಿ ಎಣ್ಣೆಯನ್ನಾಗಲಿ ಮುಟ್ಟಿದರೆ ಮುಟ್ಟಿದ ವಸ್ತು ಪವಿತ್ರ ವಸ್ತುವಾಗಬಹುದೇ?” ಯಾಜಕರು ಉತ್ತರವಾಗಿ ‘ಇಲ್ಲ’ ಎಂದರು.
IRVKN ಒಬ್ಬನು ತನ್ನ ವಸ್ತ್ರದ ಸೆರಗಿನಲ್ಲಿ ಮೀಸಲಿನ ಮಾಂಸವನ್ನು ಇಟ್ಟುಕೊಂಡು ಬರುತ್ತಿರುವಾಗ ಆ ಸೆರಗು ರೊಟ್ಟಿಯನ್ನಾಗಲಿ ಇಲ್ಲವೆ ಗುಗ್ಗರಿಯನ್ನಾಗಲಿ ಅಥವಾ ದ್ರಾಕ್ಷಾರಸವನ್ನಾಗಲಿ ಇಲ್ಲವೆ ಎಣ್ಣೆಯನ್ನು ಅಥವಾ ಯಾವ ಆಹಾರ ಪದಾರ್ಥವನ್ನಾಗಲಿ ಸೋಕಿದರೆ ಅವು ಪರಿಶುದ್ಧವಾಗುವುದೋ? ಎಂದು ಧರ್ಮವಿಧಿಯನ್ನು ವಿಚಾರಿಸು” ಪ್ರವಾದಿಯು ಹಾಗೆ ವಿಚಾರಿಸಲು ಯಾಜಕರು “ಇಲ್ಲ” ಎಂದು ಉತ್ತರಕೊಟ್ಟರು. PEPS