Versions
KNV ಆದಕಾರಣ ಕರ್ತನ ಕೋಪವು ಜನರಿಗೆ ವಿರೋ ಧವಾಗಿ ಉರಿಗೊಂಡು ಅವರ ಮೇಲೆ ತನ್ನ ಕೈಚಾಚಿ ಅವರನ್ನು ಹೊಡೆದಿದ್ದಾನೆ; ಗುಡ್ಡಗಳು ಕಂಪಿಸಿದವು. ಅವರ ಹೆಣಗಳು ಹರಿದು ಬೀದಿಗಳ ಮಧ್ಯದಲ್ಲಿ ಬಿದ್ದಿ ರುವವು. ಇಷ್ಟೆಲ್ಲಾ ಆದರೂ ಆತನ ಕೋಪವು ಹಿಂತಿರುಗದೆ ಇನ್ನೂ ಕೈಚಾಚಿಯೇ ಇದೆ.
ERVKN ಆದುದರಿಂದ ಯೆಹೋವನು ತನ್ನ ಜನರ ಮೇಲೆ ಬಹಳವಾಗಿ ಕೋಪಗೊಂಡಿದ್ದಾನೆ. ಯೆಹೋವನು ತನ್ನ ಕೈಗಳನ್ನೆತ್ತಿ ಅವರನ್ನು ಶಿಕ್ಷಿಸುವನು. ಆಗ ಪರ್ವತಗಳೂ ಹೆದರಿಕೊಳ್ಳುವವು; ಹೆಣಗಳು ಕಸದಂತೆ ರಸ್ತೆಗಳಲ್ಲಿ ಬಿದ್ದುಕೊಂಡಿರುವವು. ಆದರೆ ದೇವರು ಅವರ ಮೇಲೆ ಕೋಪಿಸಿಕೊಂಡೇ ಇರುವನು. ಜನರನ್ನು ಶಿಕ್ಷಿಸಲು ಆತನ ಕೈಗಳು ಮೇಲೆತ್ತಲ್ಪಟ್ಟಿರುವವು.
IRVKN ಹೀಗಿರಲು ಯೆಹೋವನು ತನ್ನ ಜನರ ಮೇಲೆ ಕೋಪಗೊಂಡು, ಅವರ ಮೇಲೆ ಕೈಯೆತ್ತಿ, ಅವರನ್ನು ಹೊಡೆದುಬಿಡುವನು.
ಆಗ ಬೆಟ್ಟಗಳು ನಡಗುವವು. ಹೆಣಗಳು ಬೀದಿಗಳಲ್ಲಿ ಕಸವಾಗಿ ಬಿದ್ದಿರುವವು.
ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೇ ಕೈಯೆತ್ತಿಯೇ ಇರುವುದು.