Versions
KNV ಕರ್ತನು ನನ್ನ ಎದುರಿನಲ್ಲಿ ನನ್ನ ಪರಾಕ್ರಮಶಾಲಿಗಳನ್ನೆಲ್ಲಾ ಕಾಲಿನ ಕೆಳಗೆ ತುಳಿದುಬಿಟ್ಟಿದ್ದಾನೆ; ಆತನು ನನ್ನ ಯೌವನಸ್ಥರನ್ನು ಜಜ್ಜಲು ನನಗೆ ವಿರುದ್ಧವಾಗಿ ಸಭೆಯನ್ನು ಕರೆದಿದ್ದಾನೆ; ಕರ್ತನು ಯೆಹೂದದ ಮಗಳಾದ ಕನ್ಯೆಯನ್ನು ದ್ರಾಕ್ಷೆಯ ತೊಟ್ಟಿಯಂತೆ ತುಳಿದಿದ್ದಾನೆ.
ERVKN “ನನ್ನ ಶೂರ ಸೈನಿಕರನ್ನೆಲ್ಲಾ ಯೆಹೋವನು ತಿರಸ್ಕರಿಸಿದ್ದಾನೆ. ಆ ಸೈನಿಕರು ನಗರದ ಒಳಭಾಗದಲ್ಲಿದ್ದರು. ಆಗ ಯೆಹೋವನು ನನ್ನ ವಿರುದ್ಧ ಒಂದು ಜನರ ಗುಂಪನ್ನು ತಂದನು. ಆತನು ನನ್ನ ತರುಣ ಸೈನಿಕರನ್ನು ಕೊಲ್ಲುವ ಸಲುವಾಗಿ ಆ ಜನರನ್ನು ತಂದನು. ಯೆಹೋವನು ದ್ರಾಕ್ಷಿಯನ್ನು ಆಲೆಯಲ್ಲಿ ತುಳಿದಿದ್ದಾನೆ. ಆ ದ್ರಾಕ್ಷಿ ಆಲೆಯು ಜೆರುಸಲೇಮ್ ಕನ್ನಿಕೆಗೆ ಸೇರಿದ್ದು.
IRVKN ಕರ್ತನು ನನ್ನ ಶೂರರನ್ನೆಲ್ಲಾ ನನ್ನ ಕಣ್ಣೆದುರಿಗೆ ಹೊರಳಾಡಿಸಿದ್ದಾನೆ; ನನ್ನ ಯುವಕರನ್ನು ಸದೆಬಡಿದಿದ್ದಾನೆ.
ನನ್ನ ಕೇಡಿಗಾಗಿಯೇ ಮಹೋತ್ಸವವನ್ನು ಏರ್ಪಡಿಸಿದ್ದಾನೆ;
ಕರ್ತನು ಯೆಹೂದವೆಂಬ ಕನ್ಯೆಯನ್ನು ತೊಟ್ಟಿಯಲ್ಲಿನ ದ್ರಾಕ್ಷಿಯ ಹಾಗೆ ತುಳಿದಿದ್ದಾನೆ.