Versions
KNV ಯೆರೂಸಲೇಮು ಕಷ್ಟ ಮತ್ತು ಸಂಕಟದಲ್ಲಿದ್ದಾಗ ಪೂರ್ವದಿನಗಳಲ್ಲಿ ತನಗಿದ್ದ ರಮ್ಯವಾದವುಗಳೆಲ್ಲವನ್ನು ಜ್ಞಾಪಕಮಾಡಿಕೊಂಡಿದ್ದಾಳೆ. ಆಕೆಯ ಜನರು ಶತ್ರುವಿನ ಕೈಯಲ್ಲಿ ಬಿದ್ದಾಗ ಯಾವನೂ ಸಹಾಯಮಾಡಲಿಲ್ಲ. ವೈರಿಗಳು ಅವಳನ್ನು ನೋಡಿ ಅವಳ ಸಬ್ಬತ್ತುಗಳ ವಿಷಯದಲ್ಲಿ ಅಪಹಾಸ್ಯಮಾಡಿದರು.
ERVKN ಜೆರುಸಲೇಮ್ ಹಿಂದಿನ ದಿನಗಳ ಬಗ್ಗೆ ಯೋಚಿಸುತ್ತಾಳೆ; ತಾನು ಮನೆಯನ್ನು ಕಳೆದುಕೊಂಡ ಮತ್ತು ಹಿಂಸೆಗೊಳಗಾದ ಕಾಲವನ್ನು ಜ್ಞಾಪಿಸಿಕೊಳ್ಳುತ್ತಾಳೆ. ಹಿಂದೆ ಅವಳಿಗಿದ್ದ ಎಲ್ಲ ಭೋಗ್ಯ ವಸ್ತುಗಳನ್ನು ಅವಳು ಜ್ಞಾಪಿಸಿಕೊಳ್ಳುತ್ತಾಳೆ. ಹಳೆಯ ಕಾಲದಲ್ಲಿ ಲಭ್ಯವಿದ್ದ ಎಲ್ಲ ಉತ್ತಮ ವಸ್ತುಗಳನ್ನು ಅವಳು ಸ್ಮರಿಸಿಕೊಳ್ಳುತ್ತಾಳೆ. ತನ್ನ ಜನರನ್ನು ವೈರಿಗಳು ವಶಪಡಿಸಿಕೊಂಡ ಸಂಗತಿಯನ್ನು ಅವಳು ಸ್ಮರಿಸುತ್ತಾಳೆ. ಆಗ ತನಗೆ ಸಹಾಯ ಮಾಡಲು ಯಾರೂ ಇರಲಿಲ್ಲವೆಂಬುದನ್ನು ಅವಳು ಜ್ಞಾಪಿಸಿಕೊಳ್ಳುತ್ತಾಳೆ. ಅವಳ ಶತ್ರುಗಳು ಅವಳನ್ನು ನೋಡಿ ನಕ್ಕರು. ಅವಳು ಹಾಳಾದುದನ್ನು ನೋಡಿ ಅವರು ನಕ್ಕರು.
IRVKN ಯೆರೂಸಲೇಮ್ ಪುರಿಯು ದಿಕ್ಕಾಪಾಲಾಗಿ ಅಲೆದು ಕಷ್ಟಪಡುವಾಗ ಪುರಾತನಕಾಲದಿಂದ ತನಗಿದ್ದ ವೈಭವವನ್ನು ಜ್ಞಾಪಿಸಿಕೊಳ್ಳುತ್ತಾಳೆ.
ಆಕೆಗೆ ಯಾರ ಸಹಾಯವೂ ಇಲ್ಲದೆ ಆಕೆಯ ಜನರು ವಿರೋಧಿಯ ಕೈಗೆ ಸಿಕ್ಕಿದಾಗ ಹಾಳುಬಿದ್ದಿರುವ ಆಕೆಯನ್ನು ವೈರಿಗಳು ನೋಡಿ ಹಾಸ್ಯಮಾಡಿದರು.