Versions
KNV ಅವಳ ನೆರಿಗೆಯು ಅಶುದ್ಧವಾಗಿದೆ; ಅವಳು ತನ್ನ ಅಂತ್ಯವನ್ನು ಜ್ಞಾಪಕ ಮಾಡಿಕೊಳ್ಳುವದಿಲ್ಲ; ಆದುದರಿಂದ ಅವಳು ಆಶ್ಚರ್ಯ ಕರವಾಗಿ ಇಳಿದು ಬಂದಳು; ಅವಳನ್ನು ಆದರಿಸುವವರು ಯಾರೂ ಇಲ್ಲ. ಓ ಕರ್ತನೇ, ನನ್ನ ಸಂಕಟವನ್ನು ನೋಡು, ಶತ್ರುವು ತನ್ನನ್ನು ತಾನೇ ಹೆಚ್ಚಿಸಿಕೊಂಡಿದ್ದಾನೆ.
ERVKN ಜೆರುಸಲೇಮಿನ ಲಂಗಗಳು ಮಲಿನವಾಗಿದ್ದವು. ಅವಳಿಗೆ ಮುಂದೆ ಏನಾಗುವದೆಂಬುದರ ಬಗ್ಗೆ ಅವಳು ಯೋಚಿಸಲಿಲ್ಲ. ಅವಳ ಪತನ ವಿಸ್ಮಯಕಾರಿಯಾಗಿತ್ತು. ಅವಳನ್ನು ಸಂತೈಸಲು ಯಾರೂ ಇರಲಿಲ್ಲ. “ಅಯ್ಯೋ, ಯೆಹೋವನೇ, ನನಗೆಷ್ಟು ನೋವಾಗಿದೆ. ನೋಡು! ನನ್ನ ಶತ್ರು ತನ್ನನ್ನು ಎಷ್ಟು ದೊಡ್ಡವನೆಂದು ಭಾವಿಸಿಕೊಂಡಿದ್ದಾನೆ.” ಎಂದು ಆಕೆ ಹೇಳುತ್ತಾಳೆ.
IRVKN ಆಕೆಯ ನೆರಿಗೆಯು ಹೊಲಸಾಗಿತ್ತು, ಮುಂದಿನ ಗತಿಯೇನೆಂದು ಮನಸ್ಸಿಗೆ ತರಲಿಲ್ಲ; ಆದಕಾರಣ ವಿಪರೀತ ಹೀನಸ್ಥಿತಿಯಲ್ಲಿ ಬಿದ್ದು ಬಿಟ್ಟಳು; ಸಂತೈಸುವವರೇ ಇಲ್ಲ.
“ಯೆಹೋವನೇ, ನನ್ನ ಕಷ್ಟವನ್ನು ಲಕ್ಷಿಸು; ನನ್ನ ಶತ್ರು ಹೆಚ್ಚಳಪಡುತ್ತಾನಲ್ಲಾ” ಎಂದು ಮೊರೆಯಿಡುತ್ತಾಳೆ.