Versions
KNV ಅವನು ತನ್ನ ಅತಿಕ್ರಮ ಬಲಿಯನ್ನು ಕರ್ತನ ಸನ್ನಿಧಿಗೆ ನಿನ್ನ ಅಂದಾಜಿನ ಮೇರೆಗೆ ಮಂದೆಯಿಂದ ದೋಷ ವಿಲ್ಲದ ಒಂದು ಟಗರನ್ನು ಅತಿಕ್ರಮ ಬಲಿಗಾಗಿ ಯಾಜಕನ ಬಳಿಗೆ ತರಬೇಕು.
ERVKN “ಆ ವ್ಯಕ್ತಿ ದೋಷಪರಿಹಾರಕ ಯಜ್ಞವನ್ನು ಯಾಜಕನ ಬಳಿಗೆ ತರಬೇಕು. ಅದು ಮಂದೆಯಿಂದ ತಂದ ಟಗರಾಗಿರಬೇಕು. ಟಗರಿನಲ್ಲಿ ಯಾವ ದೋಷವೂ ಇರಬಾರದು. ಅದು ಯಾಜಕನು ಹೇಳುವ ಬೆಲೆಯುಳ್ಳದ್ದಾಗಿರಬೇಕು. ಅದು ಯೆಹೋವನಿಗೆ ಸಮರ್ಪಿಸುವ ದೋಷಪರಿಹಾರಕ ಯಜ್ಞವಾಗಿರುವುದು.
IRVKN ಅವನು ಪ್ರಾಯಶ್ಚಿತ್ತಕ್ಕಾಗಿ ನಿನಗೆ ಸರಿಯೆಂದು ತೋರುವ ಪೂರ್ಣಾಂಗವಾದ ಟಗರನ್ನು ಹಿಂಡಿನಿಂದ ತಂದು ಅದನ್ನು ಯೆಹೋವನಿಗೆಂದು ಯಾಜಕನಿಗೆ ಒಪ್ಪಿಸಬೇಕು.