Versions
KNV ನಿನ್ನ ಸೇವಕರಾದ ಇಸ್ರಾಯೇಲ್ ಮಕ್ಕಳಿ ಗೋಸ್ಕರ ಈಗ ಹಗಲಿರುಳು ನಿನ್ನ ಸೇವಕನು ನಿನ್ನ ಮುಂದೆ ಪ್ರಾರ್ಥಿಸಿದ ಪ್ರಾರ್ಥನೆಯನ್ನೂ ನಿನಗೆ ವಿರೋಧವಾಗಿ ನಾವು ಮಾಡಿದ ಇಸ್ರಾಯೇಲ್ ಮಕ್ಕಳ ಪಾಪಗಳ ಅರಿಕೆಮಾಡುವದನ್ನೂ ನೀನು ಕೇಳುವ ಹಾಗೆ ನಿನ್ನ ಕಿವಿ ಅಲೈಸುತ್ತಾ ಇರಲಿ, ನಿನ್ನ ಕಣ್ಣುಗಳು ತೆರೆದಿರಲಿ.
ERVKN ಹಗಲಿರುಳು ನಿನ್ನಲ್ಲಿ ಪ್ರಾರ್ಥಿಸುವ ನಿನ್ನ ಸೇವಕನನ್ನು ಕಣ್ತೆರೆದು ನೋಡು: ಅವನ ಪ್ರಾರ್ಥನೆಗೆ ಕಿವಿಗೊಟ್ಟು ಆಲಿಸು. ನಿನ್ನ ಸೇವಕರಾದ ಇಸ್ರೇಲರಿಗಾಗಿ ನಾನು ಪ್ರಾರ್ಥಿಸುತ್ತಿದ್ದೇನೆ. ಇಸ್ರೇಲರಾದ ನಾವು ನಿನಗೆ ವಿರೋಧವಾಗಿ ಮಾಡಿದ ಪಾಪಗಳನ್ನು ನಾನು ನಿನಗೆ ಅರಿಕೆ ಮಾಡುತ್ತೇನೆ. ನಾನೂ ನನ್ನ ತಂದೆಯ ಮನೆಯವರೂ ನಿನಗೆ ವಿರುದ್ಧವಾಗಿ ಮಾಡಿದ ಪಾಪಗಳನ್ನು ನಿನಗೆ ಅರಿಕೆ ಮಾಡುತ್ತೇವೆ.
IRVKN ಕೃಪೆಮಾಡಿ ನನ್ನ ಮೊರೆಗೆ ಕಿವಿಗೊಡು, ನನ್ನನ್ನು ಕಟಾಕ್ಷಿಸು, ನಿನ್ನ ಸೇವಕನ ಪ್ರಾರ್ಥನೆಯನ್ನು ಲಾಲಿಸಬೇಕು. ನಾನು ಈಗ ಹಗಲಿರುಳೂ ನಿನ್ನ ಸನ್ನಿಧಿಯಲ್ಲಿ ನಿನ್ನ ಸೇವಕರಾದ ಇಸ್ರಾಯೇಲರಿಗಾಗಿ ಪ್ರಾರ್ಥಿಸುತ್ತಾ ಅವರು ನಿನಗೆ ವಿರುದ್ಧವಾಗಿ ಮಾಡಿದ ಪಾಪಗಳನ್ನು ಅರಿಕೆ ಮಾಡುತ್ತಾ ಇದ್ದೇನೆ; ನಾನೂ, ನನ್ನ ಪೂರ್ವಿಕರೂ ಆ ಪಾಪಗಳಲ್ಲಿ ಪಾಲುಗಾರರಾಗಿದ್ದೇವೆ.