Versions
KNV ಯಾಜಕನು ಆ ಸ್ತ್ರೀಯನ್ನು ಕರ್ತನ ಸಮ್ಮುಖದಲ್ಲಿ ನಿಲ್ಲಿಸಿ ಆಕೆಯ ತಲೆಯ ಮೇಲಿರುವ ಮುಸುಕನ್ನು ತೆಗೆದು ಅವಳ ಕೈಗಳಲ್ಲಿ ರೋಷದ ಕಾಣಿಕೆಯಾಗಿರುವ ಜ್ಞಾಪಕದ ಕಾಣಿಕೆಯನ್ನು ಇಡಬೇಕು. ಆದರೆ ಯಾಜಕನ ಕೈಯಲ್ಲಿ ಶಪಿಸುವಂತ ಕಹಿಯಾದ ನೀರು ಇರಬೇಕು.
ERVKN ಯಾಜಕನು ಅವಳನ್ನು ಯೆಹೋವನ ಮುಂದೆ ನಿಲ್ಲಿಸಿ ಅವಳ ತಲೆಯ ಕೂದಲನ್ನು ಕೆದರಿಸಿ ಆಕೆಯ ದೋಷವನ್ನು ಹೊರಪಡಿಸುವ ಧಾನ್ಯಸಮರ್ಪಣೆಯನ್ನು ಅವಳ ಕೈಯಲ್ಲಿ ಇಡಬೇಕು. ಅದು ಈರ್ಷೆಯುಳ್ಳ ಗಂಡನ ಧಾನ್ಯಸಮರ್ಪಣೆ. ಅದೇ ಸಮಯದಲ್ಲಿ ಶಾಪವನ್ನು ಉಂಟುಮಾಡುವ ನೀರಿನ ವಿಶೇಷ ಪಾತ್ರೆಯನ್ನು ಯಾಜಕನು ತನ್ನ ಕೈಯಲ್ಲಿ ಹಿಡಿದುಕೊಳ್ಳಬೇಕು.
IRVKN ಯಾಜಕನು ಆ ಸ್ತ್ರೀಯನ್ನು ಯೆಹೋವನ ಸಮ್ಮುಖದಲ್ಲಿ ನಿಲ್ಲಿಸಿ, ಅವಳ ತಲೆಯ ಮೇಲಿರುವ ಮುಸುಕನ್ನು ತೆಗೆದು, ಕೂದಲನ್ನು ಕೆದರಿಸಿ ವ್ಯಭಿಚಾರದ ಸಂಶಯವನ್ನು ಸೂಚಿಸುವ ಆ ನೈವೇದ್ಯದ ಹಿಟ್ಟನ್ನು ಅವಳ ಕೈಯಲ್ಲಿ ಇಟ್ಟು, ಶಾಪವನ್ನುಂಟುಮಾಡುವ ವಿಷಕರವಾದ ಆ ನೀರನ್ನು ಯಾಜಕನು ತನ್ನ ಕೈಯಲ್ಲಿ ಹಿಡಿದುಕೊಳ್ಳಬೇಕು.