Versions
KNV ಯಾವನು ದೇವ ಕುಮಾರನನ್ನು ತುಳಿದು ತನ್ನನ್ನು ಪವಿತ್ರಮಾಡಿದಂಥ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬ ದನ್ನು ಯೋಚಿಸಿರಿ.
ERVKN ಹೀಗಿರಲು ದೇವರ ಮಗನನ್ನು ದ್ವೇಷಿಸುವ ಒಬ್ಬ ವ್ಯಕ್ತಿಯನ್ನು ಏನು ಮಾಡಬೇಕೆಂದು ನೀವು ಆಲೋಚಿಸುವಿರಿ? ನಿಜವಾಗಿಯೂ ಆ ವ್ಯಕ್ತಿಗೆ ಇದಕ್ಕಿಂತಲೂ ತೀವ್ರವಾದ ದಂಡನೆಯನ್ನು ವಿಧಿಸಬೇಕಲ್ಲವೇ? ಹೌದು, ಹೊಸ ಒಡಂಬಡಿಕೆಯ ರಕ್ತಕ್ಕೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ಕ್ರೂರವಾದ ದಂಡನೆಯಾಗಬೇಕು. ಆ ರಕ್ತವು ಅವನನ್ನು ಪವಿತ್ರನನ್ನಾಗಿಸಿತು. ದೇವರಾತ್ಮನ ಕೃಪೆಗೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ತೀವ್ರವಾದ ದಂಡನೆಯಾಗಬೇಕು.