Versions
KNV ಇಸ್ರಾಯೇಲಿನ ಅರಸನಾದ ಅಹಾ ಬನು ಯೆಹೂದದ ಅರಸನಾದ ಯೆಹೋಷಾಫಾಟ ನಿಗೆ--ಗಿಲ್ಯಾದಿನಲ್ಲಿರುವ ರಾಮೋತಿಗೆ ನೀನು ನನ್ನ ಸಂಗಡ ಬರುತ್ತೀಯೋ ಅಂದನು. ಅದಕ್ಕವನು--ನಾನು ನಿನ್ನ ಹಾಗೆಯೂ ನನ್ನ ಜನರು ನಿನ್ನ ಜನರ ಹಾಗೆಯೂ ಯುದ್ಧದಲ್ಲಿ ನಿನ್ನ ಸಂಗಡ ಇರು ವೆವು ಅಂದನು.
ERVKN ಇಸ್ರೇಲರ ಅರಸನಾದ ಅಹಾಬನು ಯೆಹೂದದ ಅರಸನಾದ ಯೆಹೋಷಾಫಾಟನಿಗೆ, “ನೀನು ನನ್ನೊಂದಿಗೆ ರಾಮೋತ್ಗಿಲ್ಯಾದಿಗೆ ಯುದ್ಧಮಾಡಲು ಬರುವಿಯಾ?” ಎಂದು ಕೇಳಲು, ಯೆಹೋಷಾಫಾಟನು, “ನಾನು ನಿನ್ನವನೆ, ನನ್ನ ಜನರು ನಿನ್ನ ಜನರೇ ಆಗಿದ್ದಾರೆ. ನಾವು ಯುದ್ಧಮಾಡಲು ನಿಮ್ಮೊಂದಿಗೆ ಬರುತ್ತೇವೆ” ಎಂದು ಅಹಾಬನಿಗೆ ಉತ್ತರಿಸಿದನು.
IRVKN ಇಸ್ರಾಯೇಲರ ಅರಸನಾದ ಅಹಾಬನು ಯೆಹೂದ್ಯರ ಅರಸನಾದ ಯೆಹೋಷಾಫಾಟನನ್ನು, “ನನ್ನ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಬರುತ್ತೀಯೋ?” ಎಂದು ಕೇಳಿದನು. ಅದಕ್ಕೆ ಅವನು, “ನಾನೂ, ನೀನೂ ನನ್ನ ಜನರೂ ನಿನ್ನ ಜನರೂ ಒಂದೇ ಅಲ್ಲವೇ? ನಿನ್ನ ಜೊತೆಯಲ್ಲಿ ಯುದ್ಧಕ್ಕೆ ಬರುವೆನು” ಎಂದು ಉತ್ತರ ಕೊಟ್ಟನು.