Versions
KNV ಆಗ ದೇವರು ಸೊಲೊಮೋನನಿಗೆ--ಇದು ನಿನ್ನ ಹೃದಯ ದಲ್ಲಿ ಇದ್ದದರಿಂದಲೂ ಐಶ್ವರ್ಯವನ್ನೂ ಸ್ಥಿತಿಯನ್ನೂ ಘನವನ್ನೂ ನಿನ್ನ ಶತ್ರುಗಳ ಪ್ರಾಣವನ್ನೂ ಹೆಚ್ಚಾದ ದಿವಸಗಳನ್ನೂ ನೀನು ಕೇಳದೆ ನಾನು ಯಾರ ಮೇಲೆ ನಿನ್ನನ್ನು ಅರಸನಾಗಿ ಮಾಡಿದೆನೋ ಆ ನನ್ನ ಜನರಿಗೆ ನ್ಯಾಯ ತೀರಿಸುವ ಹಾಗೆ ಜ್ಞಾನವನ್ನೂ ತಿಳುವಳಿಕೆ ಯನ್ನೂ ನೀನು ಕೇಳಿದ್ದರಿಂದ ಅವು ನಿನಗೆ ಕೊಡ ಲ್ಪಟ್ಟವು.
ERVKN ಆಗ ದೇವರು ಸೊಲೊಮೋನನಿಗೆ, “ನಿನ್ನ ಕೋರಿಕೆ ಒಳ್ಳೆಯದಾಗಿದೆ. ನೀನು ಐಶ್ವರ್ಯವನ್ನಾಗಲೀ ಗೌರವವನ್ನಾಗಲೀ ಬೆಳ್ಳಿಬಂಗಾರಗಳನ್ನಾಗಲೀ ಕೇಳಲಿಲ್ಲ. ನಿನ್ನ ವೈರಿಗಳನ್ನು ನಿರ್ಮೂಲ ಮಾಡುವಂತಾಗಲೀ ಅಥವಾ ನಿನಗೆ ದೀರ್ಘಾಯುಷ್ಯವನ್ನು ಕೊಡು ಎಂದಾಗಲೀ ನೀನು ಕೇಳಿಕೊಳ್ಳದೆ ರಾಜ್ಯವನ್ನು ನ್ಯಾಯವಾಗಿ ಆಳಲು ಬೇಕಾದ ಜ್ಞಾನವಿವೇಕಗಳನ್ನು ಕೇಳಿಕೊಂಡೆ. ನಾನು ಆರಿಸಿಕೊಂಡಿರುವ ಜನಾಂಗದ ಮೇಲೆ ಆಡಳಿತ ನಡಿಸುವಾಗ ಯೋಗ್ಯವಾದ ಸಲಹೆ ಕೊಡುವಂತೆ ಜ್ಞಾನವನ್ನು ಕೇಳಿರುತ್ತೀ.
IRVKN ಆಗ ದೇವರು ಸೊಲೊಮೋನನಿಗೆ, “ಇದು ನಿನ್ನ ಆಕಾಂಕ್ಷೆಯಾಗಿ ಇದ್ದುದರಿಂದಲೂ ಘನವನ್ನೂ, ಧನವನ್ನೂ, ಐಶ್ವರ್ಯವನ್ನೂ, ನಿನ್ನ ವೈರಿಗಳ ಪ್ರಾಣವನ್ನಾಗಲಿ, ದೀರ್ಘಾಯುಷ್ಯವನ್ನಾಗಲಿ ಕೇಳದೆ, ನಾನು ಯಾರನ್ನು ಮುನ್ನಡೆಸಲು ನಿನ್ನನ್ನು ಅರಸನನ್ನಾಗಿ ಮಾಡಿದೆನೋ ಆ ನನ್ನ ಜನರಿಗೆ ನ್ಯಾಯ ತೀರಿಸುವ ಹಾಗೆ ಜ್ಞಾನ, ವಿವೇಕಗಳನ್ನು ನೀನು ಕೇಳಿಕೊಂಡದ್ದರಿಂದಲೂ ಜ್ಞಾನವೂ, ವಿವೇಕವೂ ನಿನಗೆ ಕೊಡಲ್ಪಟ್ಟಿವೆ.