Versions
KNV ತರುವಾಯ ನೀನು ಅದನ್ನು ವಧಿಸಿ ಅದರ ರಕ್ತವನ್ನು ಆರೋನನ ಮತ್ತು ಅವನ ಕುಮಾರರ ಬಲ ಕಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರಳಿಗೂ ಹಚ್ಚಿ ಮಿಕ್ಕ ರಕ್ತವನ್ನು ಯಜ್ಞವೇದಿಯ ಸುತ್ತಲೂ ಚಿಮುಕಿಸಬೇಕು.
ERVKN ಆ ಟಗರನ್ನು ವಧಿಸಿ ಅದರ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊ. ಆ ರಕ್ತವನ್ನು ಆರೋನ ಮತ್ತು ಅವನ ಪುತ್ರರ ಬಲಗಿವಿಯ ತುದಿಗೆ ಹಚ್ಚು. ಅದಲ್ಲದೆ ಅವರ ಬಲಗೈಗಳ ಹೆಬ್ಬೆರಳುಗಳಿಗೂ ಸ್ವಲ್ಪ ರಕ್ತವನ್ನು ಹಚ್ಚು. ಸ್ವಲ್ಪ ರಕ್ತವನ್ನು ಅವರ ಬಲಗಾಲಿನ ಹೆಬ್ಬೊಟ್ಟಿಗೂ ಹಚ್ಚು. ಬಳಿಕ ಉಳಿದ ರಕ್ತವನ್ನು ಯಜ್ಞವೇದಿಕೆಯ ನಾಲ್ಕು ಕಡೆಗಳಿಗೆ ಚೆಲ್ಲು.
IRVKN ನಂತರ ಅದನ್ನು ವಧಿಸಿ ಅದರ ರಕ್ತದಲ್ಲಿ ಸ್ವಲ್ಪವನ್ನು ಆರೋನನ ಮತ್ತು ಅವನ ಮಕ್ಕಳ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ, ಬಲಗಾಲಿನ ಹೆಬ್ಬೆರಳಿಗೂ ಹಚ್ಚಿ, ಮಿಕ್ಕ ರಕ್ತವನ್ನು ಯಜ್ಞವೇದಿಯ ಸುತ್ತಲು ಚಿಮುಕಿಸಬೇಕು.