Versions
KNV ಅದು ಆರೋನನಿಗೂ ಅವನ ಕುಮಾರರಿಗೂ ಇಸ್ರಾಯೇಲ್ ಮಕ್ಕಳಿಗೆ ನಿತ್ಯ ಕಟ್ಟಳೆಯಾಗಿರತಕ್ಕದ್ದು. ಯಾಕಂದರೆ ಅದು ಎತ್ತುವ ಅರ್ಪಣೆಯಾಗಿದೆ. ಇಸ್ರಾಯೇಲ್ ಮಕ್ಕಳಿಂದ ಎತ್ತುವ ಅರ್ಪಣೆಯೂ ಅವರ ಸಮಾ ಧಾನದ ಬಲಿಗಳ ಅರ್ಪಣೆಗಳಿಂದ ಅವರು ಕರ್ತನಿಗೆ ಎತ್ತುವ ಅರ್ಪಣೆಯೂ ಆಗಿರಬೇಕು.
ERVKN ಇಸ್ರೇಲರು ಆರೋನನಿಗೂ ಅವನ ಪುತ್ರರಿಗೂ ಈ ಭಾಗಗಳನ್ನು ಯಾವಾಗಲೂ ಕೊಡುವರು. ಇಸ್ರೇಲರು ಯೆಹೋವನಿಗೆ ಅರ್ಪಿಸುವ ಕಾಣಿಕೆಗಳಲ್ಲಿ ಈ ಭಾಗಗಳು ಯಾವಾಗಲೂ ಯಾಜಕರಿಗೆ ಸೇರಿದ್ದಾಗಿವೆ. ಅವರು ಯಾಜಕರಿಗೆ ಕೊಡುವ ಈ ಭಾಗಗಳು ಯೆಹೋವನಿಗೆ ಸಮರ್ಪಿಸಲ್ಪಟ್ಟಂತಿರುತ್ತವೆ.
IRVKN ಶಾಶ್ವತ ನಿಯಮವಾಗಿ ಇಸ್ರಾಯೇಲರು ಅವುಗಳನ್ನು ಆರೋನನಿಗೂ ಅವನ ವಂಶಸ್ಥರಿಗೂ ಕೊಡತಕ್ಕದ್ದು. ಅವು ಯಾಜಕರ ಭಾಗಕ್ಕಾಗಿ ಪ್ರತ್ಯೇಕಿಸಲ್ಪಟ್ಟಿವೆ. ಇಸ್ರಾಯೇಲರು ಸಮಾಧಾನ ಯಜ್ಞಕ್ಕಾಗಿ ಪಶುಗಳನ್ನು ವಧಿಸಿ ಯೆಹೋವನಿಗೆ ನೈವೇದ್ಯ ಮಾಡುವಾಗೆಲ್ಲಾ ಆ ಭಾಗಗಳನ್ನು ಯಾಜಕರಿಗಾಗಿ ಪ್ರತ್ಯೇಕಿಸಬೇಕು. PEPS