Versions
KNV ಬಹಳ ದಿವಸಗಳಾದ ಮೇಲೆ ನಾನು ನಿನ್ನನ್ನು ಪರಿಶೀ ಲಿಸುತ್ತೇನೆ; ವರುಷಗಳ ಅಂತ್ಯದಲ್ಲಿ ನೀನು ಕತ್ತಿಯಿಂದ ಹಿಂತಿರುಗಿಸಲ್ಪಟ್ಟಂಥ ದೇಶಕ್ಕೂ ಯಾವಾಗಲೂ ಬೀಡಾ ಗಿದ್ದ ಇಸ್ರಾಯೇಲ್ ಪರ್ವತಗಳ ಮೇಲೆಯೂ ಜನಾಂಗಗಳೊಳಗಿಂದ ಮುಂದೆ ತರಲ್ಪಟ್ಟು ಎಲ್ಲರೂ ಭದ್ರವಾಗಿ ವಾಸಿಸುವವರ ಬಳಿಗೂ ಬರುವಿ.
ERVKN ಘಹುಕಾಲದ ನಂತರ, ನಿಮ್ಮನುಐ ಕೆಲಸಕ್ಕೆ ತೆಗೆದುಕೊಳ್ಳಲಾಗುವುದು. ಆನಂತರದ ವರ್ಷಗಳಲ್ಲಿ, ನೀವು ಯುದ್ಧದಿಂದ ಗುಣ ಹೊಂದಿರುವ ದೇಶಕ್ಕೆ ಘರುವಿರಿ. ಆ ದೇಶದಲ್ಲಿರುವ ಜನರು ತಾವು ಕಳುಹಿಸಲ್ಪಟ್ಟಿದ್ದ ಅನೇಕ ದೇಶಗಳಿಂದ ಹಿಂತಿರುಗಿ ಘಂದು ಒಟ್ಟಾಗಿ ಸೇರಿದವರಾಗಿದ್ದಾರೆ. ಅವರು ಇಸ್ರೇಲಿನ ಪರ್ವತಗಳಿಗೆ ಮತ್ತೆ ಘರಮಾಡಲ್ಪಟ್ಟರಾಗಿದ್ದಾರೆ. ಹಿಂದಿನ ಕಾಲದಲ್ಲಿ ಅನೇಕ ಸಲ ಈ ಪರ್ವತಗಳು ಹಾಳು ಮಾಡಲ್ಪಟ್ಟಿದ್ದರೂ ಸಹ ಈಗ ಜನರನುಐ ಮತ್ತೆ ಕರೆದುಕೊಂಡು ಘರಲಾಗಿದೆ ಮತ್ತು ಅವರೆಲ್ಲರೂ ಅಲ್ಲಿ ಸುರಕ್ಷಿತವಾಗಿ ನೆಲೆಸುವರು.
IRVKN ಬಹಳ ದಿನಗಳಾದ ಮೇಲೆ ನಾನು ನಿನ್ನನ್ನು ಕರೆಯುತ್ತೇನೆ; ಕೆಲವು ವರ್ಷಗಳ ನಂತರ ಖಡ್ಗದಿಂದ ಉಳಿದುಕೊಂಡ ದೇಶಕ್ಕೂ, ಯಾವಾಗಲೂ ಹಾಳಾಗಿದ್ದ ಇಸ್ರಾಯೇಲಿನ ಪರ್ವತಗಳ ಮೇಲೆಯೂ, ಜನಾಂಗಗಳೊಳಗಿಂದ ಕೂಡಿಸಲ್ಪಟ್ಟು ಎಲ್ಲರೂ ಭದ್ರವಾಗಿ ವಾಸಿಸುವವರ ಬಳಿಗೆ ನೀನು ಬರುವಿ.