Bible Versions
Bible Books

Lamentations 2:3 (GNTERP) Textus Receptus Greek New Testament

Versions

KNV   ಆತನು ತನ್ನ ತೀಕ್ಷ್ಣ ಕೋಪದಲ್ಲಿ ಇಸ್ರಾಯೇಲಿನ ಕೊಂಬುಗಳನ್ನೆಲ್ಲಾ ಕಡಿದು ಹಾಕಿದ್ದಾನೆ. ಆತನು ಶತ್ರುವಿನ ಎದುರಿನಿಂದ ತನ್ನ ಬಲಗೈಯನ್ನು ಹಿಂತೆಗೆದುಕೊಂಡಿದ್ದಾನೆ. ಆತನು ಸುತ್ತಲೂ ಪ್ರಜ್ವಲಿಸಿ ದಹಿಸುವ ಬೆಂಕಿಯ ಹಾಗೆ ಯಾಕೋಬನಿಗೆ ವಿರುದ್ಧ ವಾಗಿ ದಹಿಸಿಬಿಟ್ಟಿದ್ದಾನೆ.
ERVKN   ನನ್ನ ಕೋಪದ ಭರದಲ್ಲಿ ಯೆಹೋವನು ಇಸ್ರೇಲಿನ ಶಕ್ತಿಯನ್ನೆಲ್ಲ ಕತ್ತರಿಸಿ ಹಾಕಿದನು. ಆತನು ಇಸ್ರೇಲಿನಿಂದ ತನ್ನ ಬಲಗೈಯನ್ನು ಹಿಂತೆಗೆದುಕೊಂಡನು. ಶತ್ರು ಬಂದಾಗ ಆತನು ಹೀಗೆ ಮಾಡಿದನು. ಅಗ್ನಿಜ್ವಾಲೆಗಳಂತೆ ಆತನು ಯಾಕೋಬಿನಲ್ಲಿ ಉರಿದನು. ಸುತ್ತಮುತ್ತಲೆಲ್ಲ (ಪ್ರತಿಯೊಂದನ್ನೂ) ದಹಿಸುವ ಬೆಂಕಿಯಂತೆ ಆತನಿದ್ದನು.
IRVKN   ಆತನು ಶತ್ರುವಿನ ಮೇಲೆತ್ತಿದ ಬಲಗೈಯನ್ನು ಹಿಂದೆಗೆದು, ಇಸ್ರಾಯೇಲಿನ ಕೊಂಬನ್ನು ರೋಷಾಗ್ನಿಯಿಂದ ತೀರಾ ಕಡಿದುಹಾಕಿ,
ಸುತ್ತಮುತ್ತಲು ನುಂಗುವ ಅಗ್ನಿಜ್ವಾಲೆಯಂತೆ ಯಾಕೋಬನ್ನು ದಹಿಸಿಬಿಟ್ಟಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us