Versions
KNV ನಿಮ್ಮೆಲ್ಲರ ವಿಷಯದಲ್ಲಿ ಹೀಗೆ ಯೋಚಿಸು ವದು ನನಗೆ ನ್ಯಾಯವಾಗಿದೆ; ಯಾಕಂದರೆ ನಾನು ಬೇಡಿಬಿದ್ದಿರುವಾಗಲೂ ಸುವಾರ್ತೆಯ ವಿಷಯದಲ್ಲಿ ಉತ್ತರ ಹೇಳಿ ಸ್ಥಾಪಿಸುವಾಗಲೂ ನೀವೆಲ್ಲರು ನಾನು ಹೊಂದಿದ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು ನಿಮ್ಮನ್ನು ನನ್ನ ಹೃದಯದಲ್ಲಿಟ್ಟುಕೊಂಡಿದ್ದೇನೆ.
ERVKN ನಿಮ್ಮೆಲ್ಲರ ವಿಷಯದಲ್ಲಿ ಈ ರೀತಿ ಆಲೋಚಿಸುವುದು ನ್ಯಾಯಬದ್ಧವಾದದ್ದೆಂದು ನನಗೆ ಗೊತ್ತಿದೆ. ನೀವು ನನ್ನ ಹೃದಯದಲ್ಲಿರುವುದರಿಂದ, ನಾನು ನಿಮಗೆ ತುಂಬ ಸಮೀಪಸ್ಥನಾಗಿದ್ದೇನೆಂದು ಭಾವಿಸುತ್ತೇನೆ. ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾದ ಕಾರಣ ನೀವು ನನಗೆ ಸಮೀಪರಾಗಿದ್ದೀರಿ. ನಾನು ಸೆರೆಯಲ್ಲಿರುವಾಗಲೂ ಸುವಾರ್ತೆಯನ್ನು ಪ್ರತಿಪಾದಿಸುವಾಗಲೂ ನಿರೂಪಿಸುವಾಗಲೂ ನೀವು ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರಿ.