Versions
KNV ನಿನ್ನಲ್ಲಿ ವೀಣೆಗಾರರೂ ವಾದ್ಯ ಗಾರರೂ ಕೊಳಲೂದುವವರೂ ತುತೂರಿಯವರು ಮಾಡುವ ಧ್ವನಿಯೂ ಇನ್ನೆಂದಿಗೂ ಕೇಳಿಸುವದಿಲ್ಲ. ಯಾವ ವಿಧವಾದ ಕೈಗಾರಿಕೆಯನ್ನು ಮಾಡುವವರು ನಿಮ್ಮಲ್ಲಿ ಇನ್ನೆಂದಿಗೂ ಸಿಕ್ಕುವದಿಲ್ಲ; ಬೀಸುವ ಕಲ್ಲಿನ ಶಬ್ದವೂ ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ.
ERVKN ಹಾರ್ಪ್ ಮುಂತಾದ ವಾದ್ಯಗಳನ್ನು ನುಡಿಸುವ ಜನರ ಸಂಗೀತವು, ಕೊಳಲು ಮತ್ತು ತುತೂರಿಗಳನ್ನು ನುಡಿಸುವ ಜನರ ಸಂಗೀತವು ನಿನ್ನಲ್ಲಿ ಇನ್ನೆಂದಿಗೂ ಕೇಳಿಬರುವುದಿಲ್ಲ. ಕುಶಲಕರ್ಮಿಗಳಾರೂ ನಿನ್ನಲ್ಲಿ ಸಿಕ್ಕುವುದಿಲ್ಲ. ಬೀಸುವ ಕಲ್ಲಿನ ಶಬ್ದವು ಇನ್ನೆಂದಿಗೂ ನಿನ್ನಲ್ಲಿ ಕೇಳಿಬರುವುದಿಲ್ಲ.
IRVKN ಬಾಬೆಲೇ ನಿನ್ನಲ್ಲಿ ‡ ಯೆಶಾ 14:11; 24:8; ಯೆಹೆ. 26:13: ವೀಣೆಗಾರರೂ, ವಾದ್ಯಗಾರರೂ, ಕೊಳಲು ಊದುವವರೂ, ತುತ್ತೂರಿಯವರೂ ಮೊದಲಾದವರ ಧ್ವನಿಯೂ ಇನ್ನೆಂದಿಗೂ ಕೇಳಿಸುವುದಿಲ್ಲ. ಯಾವುದೇ ವಿಧವಾದ ಕಸಬುಗಾರನೂ ನಿನ್ನಲ್ಲಿ ಇನ್ನೆಂದಿಗೂ ಕಾಣ ಸಿಕ್ಕುವುದಿಲ್ಲ. § ಪ್ರಸಂಗಿ. 12:4; ಯೆರೆ 25:10: ಬೀಸುವ ಕಲ್ಲಿನ ಶಬ್ದವು ನಿನ್ನಲ್ಲಿ ಇನ್ನೆಂದಿಗೂ ಕೇಳಿಸದು.