Bible Versions
Bible Books

1 Samuel 14:45 (GNTTRP) Tischendorf Greek New Testament

Versions

KNV   ಆದರೆ ಜನರು ಸೌಲನಿಗೆ--ಇಸ್ರಾಯೇಲಿನಲ್ಲಿ ದೊಡ್ಡ ರಕ್ಷಣೆ ಯನ್ನುಂಟು ಮಾಡಿದ ಯೋನಾತಾನನು ಸಾಯ ಬಹುದೋ? ಅದು ಎಂದಿಗೂ ಆಗದು; ಅವನು ಇಂದು ಕರ್ತನ ಸಹಾಯದ ಮೂಲಕ ಕಾರ್ಯವನ್ನು ನಡಿಸಿದ್ದರಿಂದ ಕರ್ತನ ಆಣೆ, ಅವನ ತಲೆಯಲ್ಲಿರುವ ಒಂದು ಕೂದಲಾದರೂ ನೆಲದ ಮೇಲೆ ಬೀಳಬಾರದು ಅಂದರು. ಜನರು ಯೋನಾತಾನನನ್ನು ಸಾಯದ ಹಾಗೆ ಬಿಡಿಸಿಕೊಂಡರು.
ERVKN   ಆದರೆ ಸೈನಿಕರು ಸೌಲನಿಗೆ, “ಈ ದಿನ ಇಸ್ರೇಲರನ್ನು ಮುನ್ನಡೆಸಿ ಮಹಾವಿಜಯವನ್ನು ಉಂಟುಮಾಡಿದ ಯೋನಾತಾನನು ಸಾಯಬೇಕೋ? ಇಲ್ಲ! ಜೀವಸ್ವರೂಪನಾದ ಯೆಹೋವನಾಣೆ, ಯೋನಾತಾನನ ತಲೆಕೂದಲಲ್ಲಿ ಒಂದಾದರೂ ನೆಲಕ್ಕೆ ಬೀಳಲು ನಾವು ಬಿಡುವುದಿಲ್ಲ. ಇಂದು ಫಿಲಿಷ್ಟಿಯರ ವಿರುದ್ಧ ಹೋರಾಡಲು ದೇವರು ಯೋನಾತಾನನಿಗೆ ಸಹಾಯಮಾಡಿದ್ದಾನೆ” ಎಂದು ಹೇಳಿದರು. ಹೀಗೆ ಜನರು ಯೋನಾತಾನನನ್ನು ರಕ್ಷಿಸಿದರು. ಅವನನ್ನು ಸಾಯಿಸಲಿಲ್ಲ.
IRVKN   ಜನರು ಅವನಿಗೆ, “ದೇವರ ಸಹಾಯದಿಂದ ಹೊತ್ತು ಇಸ್ರಾಯೇಲರಿಗೆ ಮಹಾ ಜಯವನ್ನುಂಟುಮಾಡಿದ ಯೋನಾತಾನನು ಸಾಯಬೇಕೋ? ಕೂಡದು; ಯೆಹೋವನಾಣೆ, ಅವನ ತಲೆಗೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಿಸಬಾರದು” ಎಂದು ಹೇಳಿ, ಪ್ರಾಯಶ್ಚಿತ್ತವನ್ನು ಕೊಟ್ಟು, ಅವನನ್ನು ಬಿಡಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us