Bible Versions
Bible Books

2 Corinthians 9:2 (GNTTRP) Tischendorf Greek New Testament

Versions

KNV   ನಿಮ್ಮ ಮನಸ್ಸು ಸಿದ್ದವಾಗಿದೆ ಎಂಬದು ನನಗೆ ಗೊತ್ತುಂಟು; ಒಂದು ವರುಷದ ಹಿಂದೆ ಅಕಾಯದವರು ಸಹಾಯಮಾಡುವದಕ್ಕೆ ಸಿದ್ಧವಾಗಿ ದ್ದರೆಂದು ಮಕೆದೋನ್ಯದವರ ಮುಂದೆ ನಿಮ್ಮನ್ನು ಹೊಗಳುತ್ತಾ ಇದ್ದೇನೆ; ನಿಮ್ಮ ಆಸಕ್ತಿಯು ಬಹು ಜನರನ್ನು ಪ್ರೇರೇಪಿಸಿತು.
ERVKN   ಸಹಾಯ ಮಾಡಬೇಕೆಂಬ ಬಯಕೆಯು ನಿಮಗಿದೆಯೆಂದು ನನಗೆ ಗೊತ್ತಿದೆ. ಮಕೆದೋನಿಯದಲ್ಲಿ ಜನರಿಗೆ ನಿಮ್ಮ ವಿಷಯದಲ್ಲಿ ಹೆಮ್ಮೆಯಿಂದ ಹೇಳುತ್ತಲೇ ಇದ್ದೇನೆ. ಅಖಾಯದಲ್ಲಿರುವ ನೀವು ಕಳೆದ ವರ್ಷದಿಂದಲೂ ಕೊಡಲು ಸಿದ್ಧರಾಗಿದ್ದೀರೆಂದು ಅವರಿಗೆ ಹೇಳಿದೆನು. ನಿಮ್ಮಲ್ಲಿರುವ ಕೊಡಬೇಕೆಂಬ ಬಯಕೆಯು ಇಲ್ಲಿರುವ ಅನೇಕ ಜನರಲ್ಲಿ ಕೊಡಬೇಕೆಂಬ ಬಯಕೆಯನ್ನು ಉಂಟುಮಾಡಿದೆ.
IRVKN   ನಿಮ್ಮ ಮನಸ್ಸಿನ ಬಯಕೆ ಏನೆಂಬುದು ನನಗೆ ಗೊತ್ತುಂಟು. ಕಳೆದ ವರ್ಷದಿಂದಲೂ ಅಖಾಯದವರು ಸಹಾಯಮಾಡುವುದಕ್ಕೆ ಸಿದ್ಧರಾಗಿದ್ದರೆಂದು ಮಕೆದೋನ್ಯದವರ ಮುಂದೆ 2 ಕೊರಿ 8:24 ನಿಮ್ಮನ್ನು ಹೊಗಳುತ್ತಾ ಇದ್ದೇನೆ. ಮತ್ತು ನಿಮ್ಮ ಆಸಕ್ತಿಯು ಅವರಲ್ಲಿ ಬಹುಜನರನ್ನು ಪ್ರೇರೇಪಿಸಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us