Versions
KNV ಒಂದು ವೇಳೆ ನಿನ್ನ ದೇವರಾದ ಕರ್ತನು, ಜೀವವುಳ್ಳ ದೇವ ರನ್ನು ನಿಂದಿಸಲು ತನ್ನ ಯಜಮಾನನಾದ ಅಶ್ಶೂರಿನ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ಮಾತುಗಳನ್ನು ಕೇಳಿ, ನಿನ್ನ ದೇವರಾದ ಕರ್ತನು ಕೇಳಿದ ಅವನ ಮಾತುಗಳಿಗೋಸ್ಕರ ಅವನನ್ನು ಗದರಿಸುವನು. ಆದ ದರಿಂದ ನೀನು ಉಳಿದವರಿಗೋಸ್ಕರ ಪ್ರಾರ್ಥನೆ ಸಲ್ಲಿಸಬೇಕು ಅಂದನು.
ERVKN ಸೇನಾಧಿಪತಿಯ ಒಡೆಯನಾದ ಅಶ್ಶೂರದ ರಾಜನು, ಜೀವಸ್ವರೂಪನಾದ ದೇವರ ಬಗ್ಗೆ ಕೆಟ್ಟದ್ದನ್ನು ನುಡಿಯಲು ಅವನನ್ನು ಕಳುಹಿಸಿದನು. ನಿಮ್ಮ ದೇವರಾದ ಯೆಹೋವನು ಅವುಗಳನ್ನೆಲ್ಲ ಕೇಳಿರುತ್ತಾನೆ. ಯೆಹೋವನು ಶತ್ರುಗಳನ್ನು ತಪ್ಪಿತಸ್ಥರೆಂದು ನಿರ್ಧರಿಸಬಹುದು! ಆದ್ದರಿಂದ ಇನ್ನೂ ಜೀವಸಹಿತ ಉಳಿದಿರುವ ಜನರಿಗಾಗಿ ಪ್ರಾರ್ಥಿಸಿ” ಎಂದು ಹೇಳಿದರು.
IRVKN ಜೀವಸ್ವರೂಪನಾದ ದೇವರನ್ನು ದೂಷಿಸುವುದಕ್ಕಾಗಿ ತನ್ನ ಯಜಮಾನನಾದ ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದನೆಯ ಮಾತುಗಳನ್ನು, ನಿನ್ನ ದೇವರಾದ ಯೆಹೋವನು ಕೇಳಿರುವನು. ನಿನ್ನ ದೇವರಾದ ಯೆಹೋವನು ತಾನು ಹೇಳಿದ ಮಾತುಗಳ ನಿಮಿತ್ತ ಮುಯ್ಯಿತೀರಿಸುವನು. ಆದುದರಿಂದ ಉಳಿದಿರುವ ಸ್ವಲ್ಪ ಜನರಿಗಾಗಿಯಾದರೂ ಆತನನ್ನು ಪ್ರಾರ್ಥಿಸು ಎಂಬುದಾಗಿ ಹಿಜ್ಕೀಯನು ಹೇಳುತ್ತಾನೆ” ಎಂದು ಹೇಳಿರಿ ಅಂದನು.