Bible Versions
Bible Books

2 Samuel 11:11 (GNTTRP) Tischendorf Greek New Testament

Versions

KNV   ಊರೀಯನು ದಾವೀದ ನಿಗೆ--ಮಂಜೂಷವೂ ಇಸ್ರಾಯೇಲ್ಯರೂ ಯೆಹೂದ ದವರೂ ಡೇರೆಗಳಲ್ಲಿ ವಾಸಿಸಿರುವಾಗಲೂ ನನ್ನ ಒಡೆಯನಾದ ಯೋವಾಬನೂ ನನ್ನ ಒಡೆಯನ ಸೇವ ಕರೂ ಬೈಲಿನಲ್ಲಿ ದಂಡಿಳಿದಿರುವಾಗ ನಾನು ಉಣ್ಣುವ ದಕ್ಕೂ ಕುಡಿಯುವದಕ್ಕೂ ನನ್ನ ಹೆಂಡತಿಯ ಸಂಗಡ ಮಲಗುವದಕ್ಕೂ ನನ್ನ ಮನೆಗೆ ಹೋಗಲೋ? ನಿನ್ನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ಕಾರ್ಯ ಮಾಡುವದಿಲ್ಲ ಅಂದನು.
ERVKN   ಊರೀಯನು ದಾವೀದನಿಗೆ, “ಪವಿತ್ರ ಪೆಟ್ಟಿಗೆಯೂ ಇಸ್ರೇಲಿನ ಮತ್ತು ಯೆಹೂದದ ಸೈನಿಕರೂ ಗುಡಾರಗಳಲ್ಲಿ ನೆಲೆಸಿದ್ದಾರೆ. ನನ್ನ ಒಡೆಯನಾದ ಯೋವಾಬನು ಮತ್ತು ನನ್ನ ರಾಜನ ಸೇವಕರು ಹೊಲದಲ್ಲಿ ಪಾಳೆಯ ಮಾಡಿಕೊಂಡಿದ್ದಾರೆ. ಆದ್ದರಿಂದ ಅನ್ನಪಾನಗಳನ್ನು ತೆಗೆದುಕೊಳ್ಳುವುದಕ್ಕೂ ಪತ್ನಿಯ ಜೊತೆಯಲ್ಲಿ ಮಲಗುವುದಕ್ಕೂ ನಾನು ಮನೆಗೆ ಹೋಗುವುದು ಸರಿಯಲ್ಲ. ನಿನ್ನಾಣೆ, ನಿನ್ನ ಜೀವದಾಣೆ, ನಾನು ಇಂಥದನ್ನು ಮಾಡುವುದೇ ಇಲ್ಲ.” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us