Versions
KNV ಹೀಗೆ ನಾನು ತಿರುಗಿಕೊಂಡು ಸೂರ್ಯನ ಕೆಳಗೆ ನಡೆಯುತ್ತಿರುವ ಹಿಂಸೆಗಳನ್ನೆಲ್ಲಾ ನಾನು ಯೋಚಿಸಿದೆನು; ಹಿಂಸಿಸಲ್ಪಟ್ಟವರ ಕಣ್ಣೀರನ್ನೂ ಅವರನ್ನು ಆದರಿಸುವವರು ಯಾರೂ ಇಲ್ಲದಿರುವ ದನ್ನೂ ನೋಡಿದೆನು; ಅವರನ್ನು ಹಿಂಸೆಪಡಿಸುವವರ ಕಡೆಗೆ ಶಕ್ತಿ ಇತ್ತು; ಆದರೆ ಇವರನ್ನು ಆದರಿಸುವವನು ಯಾವನೂ ಇಲ್ಲ.
ERVKN ನಾನು ದೃಷ್ಟಿಸಿ ನೋಡಿದಾಗ, ಅನೇಕ ಜನರು ಹಿಂಸೆಗೆ ಒಳಗಾಗಿರುವುದನ್ನು ಕಂಡೆನು. ಅವರ ಕಣ್ಣೀರನ್ನೂ ನೋಡಿದೆನು. ದುಃಖದಲ್ಲಿದ್ದ ಅವರನ್ನು ಸಂತೈಸಲು ಒಬ್ಬರೂ ಇರಲಿಲ್ಲ. ಹಿಂಸಕರು ಎಲ್ಲಾ ಅಧಿಕಾರವನ್ನು ಹೊಂದಿದ್ದರು; ಅವರಿಂದ ಹಿಂಸೆಗೆ ಒಳಗಾದವರನ್ನು ಸಂತೈಸಲು ಯಾರೂ ಇರಲಿಲ್ಲ.
IRVKN ಆ ಮೇಲೆ ಪುನಃ ದೃಷ್ಟಿಸಿ ಸೂರ್ಯನ ಕೆಳಗೆ ನಡೆಯುತ್ತಿರುವ ಹಿಂಸೆಗಳನ್ನೆಲ್ಲಾ ನೋಡಿದೆನು.
ಆಹಾ! ಹಿಂಸೆಗೊಂಡವರ ಕಣ್ಣೀರನ್ನು ನೋಡು.
ಅವರನ್ನು ಸಂತೈಸುವವರು ಯಾರೂ ಇಲ್ಲ. ಅವರನ್ನು ಹಿಂಸಿಸುವವರಿಗೆ ಬಹಳ ಬಲ ಇದೆ.
ಹಿಂಸೆಗೊಂಡವರನ್ನು ಸಂತೈಸುವವರು ಒಬ್ಬರೂ ಇಲ್ಲ.