Versions
KNV ಅವನು ತನ್ನ ಚಿಕ್ಕಪ್ಪನ ಮಗಳಾದ ಎಸ್ತೇರಳೆಂಬ ಹದಸ್ಸಳನ್ನು ಸಾಕಿದವನಾಗಿದ್ದನು; ಅವ ಳಿಗೆ ತಂದೆ ತಾಯಿಗಳು ಇರಲಿಲ್ಲ. ಈ ಕನ್ನಿಕೆಯು ರೂಪವತಿಯಾಗಿಯೂ ಸೌಂದರ್ಯವಂತಳಾಗಿಯೂ ಇದ್ದಳು. ಅವಳ ತಂದೆ ತಾಯಿಗಳು ಸತ್ತುಹೋದ ತರುವಾಯ ಮೊರ್ದೆಕೈ ಅವಳನ್ನು ತನ್ನ ಮಗಳ ಹಾಗೆ ತೆಗೆದುಕೊಂಡನು.
ERVKN ಇವನ ಬಳಿಯಲ್ಲಿ ಇವನ ಚಿಕ್ಕಪ್ಪನ ಮಗಳಾದ ಹದೆಸ್ಸಾ ಎಂಬ ಕನ್ನಿಕೆ ಇದ್ದಳು. ಈಕೆ ತಂದೆಯೂ ತಾಯಿಯೂ ಇಲ್ಲದ ತಬ್ಬಲಿಯಾಗಿದ್ದಳು. ಈಕೆಯ ತಂದೆತಾಯಿಗಳು ಸತ್ತಂದಿನಿಂದ ಈಕೆಯನ್ನು ಮೊರ್ದೆಕೈಯು ತನ್ನ ಮಗಳನ್ನಾಗಿ ಸ್ವೀಕರಿಸಿ ಸಾಕುತ್ತಿದ್ದನು. ಹದೆಸ್ಸಾಳನ್ನು ಎಸ್ತೇರ್ ಎಂಬ ಹೆಸರಿನಿಂದಲೂ ಕರೆಯುತ್ತಿದ್ದರು. ತುಂಬಾ ಸೌಂದರ್ಯವತಿಯಾಗಿದ್ದ ಈಕೆ ಆಕರ್ಷಕಳಾಗಿದ್ದಳು.
IRVKN ಇವನು ಎಸ್ತೇರ್ ಎಂಬ ಹೆಸರಿನ ಹದೆಸ್ಸಾ ಎಂಬ ತನ್ನ ಚಿಕ್ಕಪ್ಪನ ಅನಾಥಳಾದ ಮಗಳನ್ನು ತಂದೆತಾಯಿಗಳು ಸತ್ತಂದಿನಿಂದ ಪುತ್ರಿಯನ್ನಾಗಿ ಸ್ವೀಕರಿಸಿ ಸಾಕುತ್ತಿದ್ದನು. ಆಕೆಯು ರೂಪವತಿಯೂ ಲಾವಣ್ಯವತಿಯೂ ಆಗಿದ್ದಳು.