Versions
KNV ಈ ಸಂಗತಿಗಳು ಉಪಮಾನವಾಗಿವೆ; ಹೇಗಂದರೆ, ಇವರು ಎರಡು ಒಡಂಬಡಿಕೆಗಳೆ, ಒಂದು ಒಡಂಬಡಿಕೆ ಸೀನಾಯಿ ಪರ್ವತದಿಂದ ಉತ್ಪನ್ನವಾಗಿ ದಾಸತ್ವದಲ್ಲಿರಬೇಕಾದ ಮಕ್ಕಳನ್ನು ಹೆರುವಂಥದ್ದು; ಅದೇ ಹಾಗರ್.
ERVKN ಈ ಸಂಗತಿಗಳು ನಮಗೆ ಉಪಮಾನವಾಗಿವೆ. ದೇವರ ಮತ್ತು ಮನುಷ್ಯರ ನಡುವೆ ಆದ ಎರಡು ಒಡಂಬಡಿಕೆಗಳಿಗೆ ಈ ಇಬ್ಬರು ಸ್ತ್ರೀಯರು ಸಂಕೇತವಾಗಿದ್ದಾರೆ. ಸೀನಾಯಿ ಪರ್ವತದ ಮೇಲೆ ದೇವರು ಕೊಟ್ಟ ಧರ್ಮಶಾಸ್ತ್ರವೇ ಮೊದಲನೆ ಒಡಂಬಡಿಕೆ. ಈ ಒಡಂಬಡಿಕೆಯ ಅಧೀನದಲ್ಲಿದ್ದ ಜನರು ಗುಲಾಮರಂತಿದ್ದರು. ತಾಯಿಯಾದ ಹಾಗರಳು ಆ ಒಡಂಬಡಿಕೆಯಂತಿದ್ದಳು.
IRVKN ಈ ಸಂಗತಿಗಳು ಹೋಲಿಕೆಗಳಾಗಿವೆ. ಹೇಗೆಂದರೆ ಆ ಇಬ್ಬರು ಸ್ತ್ರೀಯರು ಎರಡು ಒಡಂಬಡಿಕೆಗಳೇ, § ಧರ್ಮೋ 33:2 ಒಂದು ಒಡಂಬಡಿಕೆಯು ಸೀನಾಯಿ ಪರ್ವತದಿಂದ ಉಂಟಾಗಿ ದಾಸತ್ವದಲ್ಲಿರಬೇಕಾದ ಮಕ್ಕಳನ್ನು ಹೆರುವಂಥದು, ಅದೇ ಹಾಗರಳು.