Versions
KNV ಯೇಸು ಅವನಿಗೆ--ಫಿಲಿಪ್ಪನೇ, ನಾನು ನಿಮ್ಮ ಸಂಗಡ ಇಷ್ಟು ಕಾಲ ಇದ್ದರೂ ನೀನು ನನ್ನನ್ನು ತಿಳಿಯಲಿಲ್ಲವೋ? ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ; ಹಾಗಾದರೆ ತಂದೆಯನ್ನು ನಮಗೆ ತೋರಿಸು ಎಂದು ನೀನು ಹೇಳುವದು ಹೇಗೆ?
ERVKN ಯೇಸು, “ಫಿಲಿಪ್ಪನೇ, ನಾನು ಇಷ್ಟು ಕಾಲದಿಂದ ನಿನ್ನೊಂದಿಗಿದ್ದರೂ ನೀನು ನನ್ನನ್ನು ತಿಳಿದುಕೊಳ್ಳಲಿಲ್ಲವೇ? ನನ್ನನ್ನು ನೋಡಿದವನು ತಂದೆಯನ್ನು ಸಹ ನೋಡಿದವನಾಗಿದ್ದಾನೆ. ಆದ್ದರಿಂದ, ತಂದೆಯನ್ನು ನಮಗೆ ತೋರಿಸು؆ ಎಂದು ಏಕೆ ಕೇಳುವಿರಿ?
IRVKN ಯೇಸು ಅವನಿಗೆ, “ಫಿಲಿಪ್ಪನೇ, ನಾನು ಇಷ್ಟು ಕಾಲ ನಿಮ್ಮ ಜೊತೆಯಲ್ಲಿಯೇ ಇದ್ದರೂ ಇನ್ನೂ ನೀನು ನನ್ನನ್ನು ತಿಳಿಯಲಿಲ್ಲವೇ! ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ, ಮತ್ತು ನಮಗೆ ತಂದೆಯನ್ನು ತೋರಿಸು ಎಂದು ನೀನು ಹೇಳುವುದಾದರು ಹೇಗೆ?