Versions
KNV ಹೆಸರು ಹೆಸರಾಗಿ ಬರೆಯಲ್ಪಟ್ಟವರಾದ ಇವರು ಯೆಹೂದದ ಅರಸನಾದ ಹಿಜ್ಕೀಯನ ದಿವಸಗಳಲ್ಲಿ ಬಂದು ಅಲ್ಲಿ ಸಿಕ್ಕಿದ ಅವರ ಡೇರೆಗಳನ್ನೂ ನಿವಾಸ ಗಳನ್ನೂ ಹೊಡೆದು ಅವರನ್ನು ಸಂಪೂರ್ಣ ನಾಶಮಾಡಿ ಅಲ್ಲಿ ತಮ್ಮ ಮಂದೆಗಳಿಗೆ ಮೇವು ಇರುವದರಿಂದ ಇಂದಿನ ವರೆಗೂ ಅವರ ಸ್ಥಳದಲ್ಲಿ ವಾಸವಾಗಿದ್ದಾರೆ.
ERVKN ಯೆಹೂದದ ಅರಸನಾಗಿದ್ದ ಹಿಜ್ಕೀಯನ ಕಾಲದಲ್ಲಿ ಇದು ಆಯಿತು. ಇವರು ಗೆದೋರಿಗೆ ಬಂದು ಹಾಮನ ಸಂತತಿಯವರೊಂದಿಗೆ ಯುದ್ಧಮಾಡಿ ಅವರ ಗುಡಾರಗಳನ್ನು ನಾಶಮಾಡಿದರು. ಅಲ್ಲದೆ ಮೆಗೂನ್ಯರ ವಿರುದ್ಧವಾಗಿ ಯುದ್ಧಮಾಡಿ ಅಲ್ಲಿ ನೆಲೆಸಿದರು. ಇವರು ಮೆಗೂನ್ಯರನ್ನೆಲ್ಲಾ ನಾಶಮಾಡಿದರು. ಇಂದಿನವರೆಗೂ ಮೆಗೂನ್ಯರಲ್ಲಿ ಯಾರೂ ಉಳಿದಿಲ್ಲ. ಹೀಗೆ ಆ ಸ್ಥಳದಲ್ಲಿ ಅವರು ನೆಲೆಸಿದರು; ಯಾಕೆಂದರೆ ಅವರ ಪಶುಗಳಿಗೆ ಅಲ್ಲಿ ಸಾಕಷ್ಟು ಹುಲ್ಲಿತ್ತು.
IRVKN ಮೇಲೆ ಹೇಳಿದ ಪ್ರಭುಗಳು ಯೆಹೂದ ರಾಜನಾದ ಹಿಜ್ಕೀಯನ ಕಾಲದಲ್ಲಿ ಅಲ್ಲಿಗೆ ಹೋಗಿ ಆ ಹಾಮ್ಯರ ಪಾಳೆಯಗಳನ್ನೂ, ಅಲ್ಲಿ ಸಿಕ್ಕಿದ ಮೆಗೂನ್ಯರನ್ನೂ ಗೆದ್ದು, ಎಲ್ಲರನ್ನೂ ನಿರ್ನಾಮಮಾಡಿದರು. ಅವರು ತಮ್ಮ ಆಡುಕುರಿಗಳಿಗೆ ಅಲ್ಲಿ ಮೇವು ಸಿಕ್ಕಿದ್ದರಿಂದ ಅಲ್ಲೇ ವಾಸಿಸಿದರು. ಅಲ್ಲಿನ ಮೂಲನಿವಾಸಿಗಳು ಯಾರೂ ಉಳಿಯಲಿಲ್ಲ.