Versions
KNV ಅದೇ ರೀತಿಯಾಗಿ ಊಟವಾದ ಮೇಲೆ ಆತನು ಪಾತ್ರೆಯನ್ನು ತೆಗೆದುಕೊಂಡು--ಈ ಪಾತ್ರೆಯು ನನ್ನ ರಕ್ತದಲ್ಲಿರುವ ಹೊಸಒಡಂಬಡಿಕೆ ಯಾಗಿದೆ; ನೀವು ಇದರಲ್ಲಿ ಪಾನಮಾಡುವಾಗೆಲ್ಲಾ ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಇದನ್ನು ಮಾಡಿರಿ ಅಂದನು.
ERVKN ಅದೇ ರೀತಿಯಲ್ಲಿ ಅವರು ಊಟ ಮಾಡಿದ ಮೇಲೆ ಯೇಸು ದ್ರಾಕ್ಷಾರಸದ ಪಾತ್ರೆಯನ್ನು ತೆಗೆದುಕೊಂಡು, "ದೇವರು ತನ್ನ ಜನರೊಂದಿಗೆ ಮಾಡಿಕೊಂಡ ಹೊಸ ಒಡಂಬಡಿಕೆಯನ್ನು ಈ ದ್ರಾಕ್ಷಾರಸ ಸೂಚಿಸುತ್ತದೆ. ಈ ಹೊಸ ಒಡಂಬಡಿಕೆ ನನ್ನ ರಕ್ತದಿಂದ ಆರಂಭವಾಗುತ್ತದೆ. ನೀವು ಇದನ್ನು ಕುಡಿಯುವಾಗಲೆಲ್ಲಾ ನನ್ನನ್ನು ನೆನಸಿಕೊಳ್ಳವವರಾಗಿದ್ದೀರಿ” ಎಂದು ಹೇಳಿದನು.
IRVKN ಊಟವಾದ ಮೇಲೆ ಆತನು ಅದೇ ರೀತಿಯಲ್ಲಿ ಪಾನಪಾತ್ರೆಯನ್ನು ತೆಗೆದುಕೊಂಡು, ‡ ಅಥವಾ ಪಾತ್ರೆಯಲ್ಲಿರುವುದು “ಈ ಪಾನಪಾತ್ರೆಯು ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ. ನೀವು ಇದರಲ್ಲಿ ಪಾನಮಾಡುವಾಗೆಲೆಲ್ಲಾ ನನ್ನನ್ನು ನೆನಪುಮಾಡಿಕೊಳ್ಳುವುದಕ್ಕೋಸ್ಕರ ಇದನ್ನು ಪಾನಮಾಡಿರಿ” ಅಂದನು.