Versions
KNV ಹಾಗೆಯೇ ಅವರು ಸೌಂದರ್ಯವತಿಯಾದ ಹುಡುಗಿಗೋಸ್ಕರ ಇಸ್ರಾ ಯೇಲಿನ ಮೇರೆಗಳಲ್ಲೆಲ್ಲಾ ಹುಡುಕಿ ಶೂನೇಮ್ಳಾದ ಅಬೀಷಗ್ಳನ್ನು ಕಂಡುಕೊಂಡು ಅವಳನ್ನು ಅರಸನ ಬಳಿಗೆ ಕರತಂದರು.
ERVKN ಆದುದರಿಂದ ರಾಜನ ಸೇವಕರು ಇಸ್ರೇಲಿನ ಎಲ್ಲ ಕಡೆಗಳಲ್ಲೂ ಯುವತಿಯೊಬ್ಬಳನ್ನು ಹುಡುಕಲಾರಂಭಿಸಿದರು. ಅವರು ರಾಜನನ್ನು ಬೆಚ್ಚಗಿಡಲು ಒಬ್ಬ ಸುಂದರ ಹುಡುಗಿಯನ್ನು ಹುಡುಕಲಾರಂಭಿಸಿದರು. ಅವರಿಗೆ ಅಬೀಷಗ್ ಎಂಬ ಹೆಸರಿನ ಯುವತಿಯು ಸಿಕ್ಕಿದಳು. ಅವಳು ಶೂನೇಮ್ ನಗರದವಳು. ಅವರು ಆ ಯುವತಿಯನ್ನು ರಾಜನ ಬಳಿಗೆ ಕರೆದುಕೊಂಡು ಬಂದರು.
IRVKN ಆನಂತರ ಅವರು ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಲ್ಲಿ ಅತಿ ಸುಂದರಿಯಾದ ಹುಡುಗಿಯನ್ನು ಹುಡುಕುವುದಕ್ಕೆ ಹೋಗಿ ಶೂನೇಮ್ ಊರಿನ ಅಬೀಷಗ್ ಎಂಬಾಕೆಯನ್ನು ಕಂಡು ಆಕೆಯನ್ನು ಅರಸನ ಬಳಿಗೆ ಕರೆದುಕೊಂಡು ಬಂದರು.