Bible Versions
Bible Books

1 Kings 2:26 (GNTWHRP) Westcott-Hort Greek New Testament

Versions

KNV   ಯಾಜಕನಾದ ಎಬ್ಯಾತಾರನಿಗೆ ಅರಸನು-- ನೀನು ಅಣತೋತಿಗೆ ನಿನ್ನ ಹೊಲಗಳಿಗೆ ಹೋಗು; ಯಾಕಂದರೆ ನೀನು ಸಾವಿಗೆ ಪಾತ್ರನಾಗಿದ್ದೀ; ಆದರೆ ನೀನು ಕರ್ತನಾದ ಯೆಹೋವನ ಮಂಜೂಷವನ್ನು ನನ್ನ ತಂದೆಯಾದ ದಾವೀದನ ಮುಂದೆ ಹೊತ್ತದ್ದ ರಿಂದಲೂ ನನ್ನ ತಂದೆಯ ಸಮಸ್ತ ಶ್ರಮೆಗಳಲ್ಲಿ ನೀನು ಶ್ರಮೆಪಟ್ಟದ್ದರಿಂದಲೂ ನಾನು ಈಗ ನಿನ್ನನ್ನು ಸಾಯಿ ಸುವದಿಲ್ಲ ಅಂದನು.
ERVKN   ಆಗ ರಾಜನಾದ ಸೊಲೊಮೋನನು ಯಾಜಕನಾದ ಎಬ್ಯಾತಾರನಿಗೆ, “ನಾನು ನಿನ್ನನ್ನು ಕೊಲ್ಲಲೇಬೇಕು. ಆದರೆ ಅಣತೋತಿನಲ್ಲಿರುವ ನಿನ್ನ ಮನೆಗೆ ಹಿಂತಿರುಗಿ ಹೋಗಲು ನಿನಗೆ ಅವಕಾಶ ಕೊಡುತ್ತೇನೆ. ನಾನು ನಿನ್ನನ್ನು ಕೊಲ್ಲುವುದಿಲ್ಲ ಏಕೆಂದರೆ ನನ್ನ ತಂದೆಯಾದ ದಾವೀದನೊಂದಿಗೆ ನಡೆಯುವಾಗ ಯೆಹೋವನ ಪವಿತ್ರಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಲು ನೀನು ಸಹಾಯ ಮಾಡಿದೆ. ನನ್ನ ತಂದೆಯ ಕಷ್ಟದ ದಿನಗಳಲ್ಲೆಲ್ಲಾ ನೀನೂ ಅವನ ಕಷ್ಟಗಳಲ್ಲಿ ಪಾಲುಗಾರನಾಗಿದ್ದದ್ದು ನನಗೆ ತಿಳಿದಿದೆ” ಎಂದು ಹೇಳಿದನು.
IRVKN   {ಎಬ್ಯಾತಾರನು ಯಾಜಕೋದ್ಯೋಗದಿಂದ ತಳ್ಳಲ್ಪಟ್ಟದ್ದು} PS ತರುವಾಯ ಅರಸನು ಯಾಜಕನಾದ ಎಬ್ಯಾತಾರನಿಗೆ, “ನೀನು ಅಣತೋತಿನಲ್ಲಿರುವ ನಿನ್ನ ಮನೆಗೆ ಹೋಗು, ನೀನು ಮರಣಕ್ಕೆ ಪಾತ್ರನು. ಆದರೆ ನೀನು ಕರ್ತನಾದ ಯೆಹೋವನ ಮಂಜೂಷವನ್ನು ಹೊತ್ತುಕೊಂಡು ನನ್ನ ತಂದೆಯಾದ ದಾವೀದನೊಡನೆ ಸಂಚರಿಸುತ್ತಾ ಅವನ ಎಲ್ಲಾ ಕಷ್ಟಗಳಲ್ಲಿ ಪಾಲುಗಾರನಾಗಿದ್ದುದ್ದರಿಂದ ಹೊತ್ತು ನಿನ್ನನ್ನು ಕೊಲ್ಲಿಸುವುದಿಲ್ಲ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us