Versions
KNV ಇಪ್ಪೇ ಮರದ ಆ ಎರಡು ಕದಗಳ ಮೇಲೆ ಅವನು ಕೆರೂಬಿಗಳೂ ಖರ್ಜೂರ ಗಿಡಗಳೂ ಅರಳಿದ ಪುಷ್ಪಗಳೂ ಆದ ಚಿತ್ರಗಳನ್ನು ಮಾಡಿಸಿ ಚಿನ್ನದಿಂದ ಹೊದಿಸಿದನು. ಆ ಕೆರೂಬಿಗಳನ್ನೂ ಖರ್ಜೂರ ಗಿಡಗಳನ್ನೂ ಚಿನ್ನದಿಂದ ಹೊದಿಸಿದನು.
ERVKN ಅವರು ಆಲೀವ್ ಮರದಿಂದ ಎರಡು ಬಾಗಿಲುಗಳನ್ನು ಮಾಡಿದರು. ಕೆಲಸಗಾರರು ಕೆರೂಬಿಗಳ, ಖರ್ಜೂರ ವೃಕ್ಷಗಳ ಮತ್ತು ಹೂಗಳ ಚಿತ್ರಗಳನ್ನು ಬಾಗಿಲುಗಳ ಮೇಲೆ ಕೆತ್ತಿದರು. ನಂತರ ಬಾಗಿಲುಗಳಿಗೆ ಚಿನ್ನವನ್ನು ಹೊದಿಸಿದರು.
IRVKN ಎಣ್ಣೇ ಮರದ ಆ ಎರಡು ಬಾಗಿಲುಗಳಲ್ಲಿಯೂ ಕೆರೂಬಿ, ಖರ್ಜೂರವೃಕ್ಷ ಮತ್ತು ಹೂವು ಇವುಗಳ ಚಿತ್ರಗಳನ್ನು ಕೆತ್ತಿಸಿ ಬಾಗಿಲುಗಳಿಗೆ ಬಂಗಾರದ ತಗಡುಗಳನ್ನು ಹೊದಿಸಿ, ಚಿತ್ರಗಳಿದ್ದಲ್ಲಿ ಆ ತಗಡನ್ನು ಇಡಿಸಿದನು. PEPS