Versions
KNV ಅವಳು--ಕ್ಷೇಮವು ಅಂದಳು. ಅವಳು ಬೆಟ್ಟದ ಮೇಲಿದ್ದ, ದೇವರ ಮನು ಷ್ಯನ ಬಳಿಗೆ ಬಂದು ಅವನ ಪಾದಗಳನ್ನು ಹಿಡಿದಳು. ಆದರೆ ಅವಳನ್ನು ತಳ್ಳಲು ಗೇಹಜಿಯು ಹತ್ತಿರ ಬಂದ ದರಿಂದ ದೇವರ ಮನುಷ್ಯನು--ಅವಳನ್ನು ಬಿಡು; ಅವಳ ಹೃದಯದಲ್ಲಿ ದುಃಖವಿದೆ; ಕರ್ತನು ಅದನ್ನು ನನಗೆ ತಿಳಿಸದೆ ಮರೆಮಾಡಿದ್ದಾನೆ ಅಂದನು.
ERVKN ಆದರೆ ಶೂನೇಮಿನ ಈ ಸ್ತ್ರೀಯು ದೇವಮನುಷ್ಯನಿದ್ದ ಬೆಟ್ಟದವರೆಗೆ ಹೋದಳು. ಅವಳು ನೆಲಕ್ಕೆ ಬಾಗಿ, ಎಲೀಷನ ಪಾದಗಳನ್ನು ಹಿಡಿದುಕೊಂಡಳು. ಶೂನೇಮಿನ ಆ ಸ್ತ್ರೀಯನ್ನು ತಳ್ಳಿಬಿಡಲು ಗೇಹಜಿಯು ಹತ್ತಿರಕ್ಕೆ ಬಂದನು. ಆದರೆ ದೇವಮನುಷ್ಯನು ಗೇಹಜಿಗೆ, “ಅವಳನ್ನು ತಡೆಯಬೇಡ! ಅವಳು ಬಹಳ ತಳಮಳಗೊಂಡಿದ್ದಾಳೆ. ಯೆಹೋವನು ನನಗೆ ಆಕೆಯ ದುಃಖವನ್ನು ಪ್ರಕಟಿಸಲಿಲ್ಲ; ನನಗೆ ಮರೆಮಾಡಿದ್ದಾನೆ” ಎಂದು ಹೇಳಿದನು.
IRVKN ಬೆಟ್ಟದ ಮೇಲಿದ್ದ ದೇವರ ಮನುಷ್ಯನ ಬಳಿಗೆ ಬಂದು, ಅವನ ಪಾದಗಳನ್ನು ಹಿಡಿದಳು. ಗೇಹಜಿಯು ಆಕೆಯನ್ನು ದೂರ ಮಾಡುವುದಕ್ಕಾಗಿ ಹತ್ತಿರ ಬರಲು, ದೇವರ ಮನುಷ್ಯನು ಅವನಿಗೆ, “ಬಿಡು, ಆಕೆಯ ಮನಸ್ಸಿನಲ್ಲಿ ಬಹು ದುಃಖವಿರುವ ಹಾಗೆ ತೋರುತ್ತದೆ. ಯೆಹೋವನು ಆಕೆಯ ದುಃಖವನ್ನು ನನಗೆ ಪ್ರಕಟಿಸದೆ, ಮರೆಮಾಡಿದ್ದಾನೆ” ಎಂದು ಹೇಳಿದನು. PEPS