Versions
KNV ದಾವೀದನು ಅಬೀಷೈಗೂ ತನ್ನ ಎಲ್ಲಾ ಸೇವಕರಿಗೂ--ಇಗೋ, ನನ್ನ ಹೊಟ್ಟೆಯಲ್ಲಿ ಹುಟ್ಟಿದ ನನ್ನ ಮಗನು ನನ್ನ ಪ್ರಾಣವನ್ನು ಹುಡುಕಿದರೆ ಎಷ್ಟೋ ಅಧಿಕವಾಗಿ ಈ ಬೆನ್ಯಾವಿಾನ್ಯನಾದವನು ಹೀಗೆ ಮಾಡುವದು ಯಾವ ದೊಡ್ಡಮಾತು? ಅವ ನನ್ನು ಬಿಟ್ಟುಬಿಡಿರಿ; ಅವನು ದೂಷಿಸಲಿ; ಯಾಕಂದರೆ ಕರ್ತನು ಅವನಿಗೆ ಹಾಗೆಯೇ ಹೇಳಿದ್ದಾನೆ.
ERVKN ದಾವೀದನು ಅಬೀಷೈಗೆ ಮತ್ತು ತನ್ನ ಎಲ್ಲಾ ಸೇವಕರಿಗೆ, “ನೋಡಿ, ನನ್ನ ಸ್ವಂತ ಮಗನೇ ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾನೆ. ಬೆನ್ಯಾಮೀನ್ ಕುಲದ ಇವನು ನನ್ನನ್ನು ಶಪಿಸುವುದು ಯಾವ ದೊಡ್ಡ ಮಾತು; ಅವನು ನನ್ನನ್ನು ಶಪಿಸುತ್ತಲೇ ಇರಲಿ. ಹೀಗೆ ಮಾಡುವಂತೆ ಯೆಹೋವನೇ ಅವನಿಗೆ ತಿಳಿಸಿದ್ದಾನೆ.
IRVKN ಇದಲ್ಲದೆ ಅವನು ಅಬೀಷೈಗೂ ತನ್ನ ಎಲ್ಲಾ ಸೇವಕರಿಗೂ, “ನೋಡಿರಿ, ನನ್ನಿಂದ ಹುಟ್ಟಿದ ನನ್ನ ಮಗನೇ ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವಲ್ಲಿ ಈ ಬೆನ್ಯಾಮೀನನು ಹೀಗೆ ಮಾಡುವುದು ಯಾವ ದೊಡ್ಡ ಮಾತು? ಬಿಡಿರಿ, ಅವನು ಶಪಿಸಲಿ. ಹೀಗೆ ಮಾಡಬೇಕೆಂದು ಯೆಹೋವನೇ ಅವನಿಗೆ ಆಜ್ಞಾಪಿಸಿದ್ದಾನೆ.