Versions
KNV ಇದಲ್ಲದೆ ನೀವು ಆ ಕಾಲದಲ್ಲಿ ಕ್ರಿಸ್ತನಿಲ್ಲದವರು ಇಸ್ರಾಯೇಲಿನ ಬಾಧ್ಯತೆಯಲ್ಲಿ ಹಕ್ಕಿಲ್ಲದವರೂ ಪರಕೀಯರು ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಿಗೆ ಅನ್ಯರೂ ನಿರೀಕ್ಷೆ ಯಿಲ್ಲದವರೂ ಈ ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ.
ERVKN ಪೂರ್ವಕಾಲದಲ್ಲಿ ನೀವು ಕ್ರಿಸ್ತನಿಲ್ಲದವರಾಗಿದ್ದಿರಿ ಎಂಬುದನ್ನು ಜ್ಞಾಪಿಸಿಕೊಳ್ಳಿರಿ. ನೀವು ಇಸ್ರೇಲಿನ ಪ್ರಜೆಗಳಾಗಿರಲಿಲ್ಲ. ದೇವರು ತನ್ನ ಜನರೊಂದಿಗೆ ಮಾಡಿಕೊಂಡಿದ್ದ ವಾಗ್ದಾನಗಳಿಗೆ ಸಂಬಂಧಪಟ್ಟ ಒಡಂಬಡಿಕೆಗಳನ್ನು ನೀವು ಹೊಂದಿರಲಿಲ್ಲ. ನಿಮಗೆ ನಿರೀಕ್ಷೆಯಿರಲಿಲ್ಲ ಮತ್ತು ನೀವು ದೇವರನ್ನು ತಿಳಿದಿರಲಿಲ್ಲ.
IRVKN ಅಂದು * ಎಫೆ 5:8: ನೀವು ಕ್ರಿಸ್ತನಿಂದ ದೂರವಿದವರೂ, † ಕೊಲೊ 1:21; ಗಲಾ. 2:15: ಇಸ್ರಾಯೇಲ್ಯರ ಹಕ್ಕಿನಲ್ಲಿ ಪಾಲಿಲ್ಲದವರೂ, ‡ ರೋಮಾ. 9:4: ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಲ್ಲಿ ಪರಕೀಯರೂ, ಯಾವ ನಿರೀಕ್ಷೆಯಿಲ್ಲದವರೂ ಮತ್ತು § 1 ಥೆಸ. 4:13: ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂಬುದನ್ನು ಜ್ಞಾಪಕಮಾಡಿಕೊಳ್ಳಿರಿ.