Versions
KNV ಆಗ ಸಾರಯಳು ಅಬ್ರಾಮನಿಗೆ--ಇಗೋ, ಮಕ್ಕ ಳನ್ನು ಹೆರದಂತೆ ಕರ್ತನು ನನಗೆ ಅಡ್ಡಿಮಾಡಿದ್ದಾನೆ. ಆದದರಿಂದ ನೀನು ನನ್ನ ದಾಸಿಯ ಬಳಿಗೆ ಹೋಗು; ಒಂದು ವೇಳೆ ಅವಳಿಂದ ನಾನು ಮಕ್ಕಳನ್ನು ಪಡೆಯ ಬಹುದು ಎಂದು ಬೇಡಿಕೊಂಡಳು. ಅಬ್ರಾಮನು ಸಾರಯಳ ಮಾತನ್ನು ಕೇಳಿದನು.
ERVKN ಸಾರಯಳು ಅಬ್ರಾಮನಿಗೆ, “ಯೆಹೋವನು ನನಗೆ ಮಕ್ಕಳನ್ನು ಪಡೆಯುವ ಅವಕಾಶವನ್ನು ಕೊಡಲಿಲ್ಲ. ಆದ್ದರಿಂದ ನನ್ನ ಸೇವಕಿಯಾದ ಹಾಗರಳ ಬಳಿಗೆ ಹೋಗು. ಆಕೆಯಲ್ಲಿ ಹುಟ್ಟುವ ಮಗುವನ್ನು ನನ್ನ ಮಗುವಂತೆ ಸ್ವೀಕರಿಸಿಕೊಳ್ಳುವೆನು” ಎಂದು ಹೇಳಿದಳು. ಅಬ್ರಾಮನು ತನ್ನ ಹೆಂಡತಿಯಾದ ಸಾರಯಳಿಗೆ ವಿಧೇಯನಾದನು.
IRVKN ಹೀಗಿರಲಾಗಿ ಸಾರಯಳು ಅಬ್ರಾಮನಿಗೆ, “ಯೆಹೋವನು ನನಗೆ ಮಕ್ಕಳನ್ನು ಕೊಡಲಿಲ್ಲವಲ್ಲಾ; ನೀನು ನನ್ನ ದಾಸಿಯಾದ ಹಾಗರಳ ಬಳಿಗೆ ಹೋಗಬೇಕು; ಒಂದು ವೇಳೆ ಅವಳ ಮೂಲಕ ನನಗೆ ಸಂತಾನವಾದೀತು” ಎಂದು ಹೇಳಲು ಅಬ್ರಾಮನು ಆಕೆಯ ಮಾತಿಗೆ ಸಮ್ಮತಿಸಿದನು.