Versions
KNV ನಾನು ಆರಿಸಿಕೊಂಡದ್ದು ಇಂಥಾ ಉಪವಾಸವೋ? ಜೊಂಡಿನಂತೆ ತಲೆಯನ್ನು ಬೊಗ್ಗಿಸಿಕೊಂಡು ಗೋಣೀ ತಟ್ಟನ್ನೂ ಬೂದಿಯನ್ನೂ ಆಸನ ಮಾಡಿಕೊಂಡು ಕೂತುಕೊಳ್ಳುವದೋ? ಇದನ್ನು ಉಪವಾಸವೆಂದು ನೀವು ಕರೆದು ಆ ದಿನದಲ್ಲಿ ಮನುಷ್ಯನು ತನ್ನ ಆತ್ಮವನ್ನು ಕುಂದಿಸುವದು ಕರ್ತನು ಮೆಚ್ಚುವ ದಿನವೆಂದು ಅನ್ನು ತ್ತೀರೋ?
ERVKN ಉಪವಾಸದ ದಿವಸಗಳಲ್ಲಿ ಜನರು ತಮ್ಮ ದೇಹದಂಡನೆ ಮಾಡುವದನ್ನು ನೋಡಲು ಆಶಿಸುತ್ತೇನೆ ಎಂದು ನೆನಸಿರುವಿರಾ? ಜನರು ತಮ್ಮ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಕೆಂದು ನಾನು ಆಶಿಸುವುದಾಗಿ ನೀವು ತಿಳಿದುಕೊಂಡಿದ್ದೀರಾ? ಜನರು ಸತ್ತ ಸಸಿಗಳಂತೆ ನನಗೆ ಅಡ್ಡಬೀಳಬೇಕೆಂದೂ ಶೋಕವಸ್ತ್ರಗಳನ್ನು ಧರಿಸಬೇಕೆಂದೂ ನಾನು ಆಶಿಸುವುದಾಗಿ ತಿಳಿದುಕೊಂಡಿದ್ದೀರಾ? ಅವರು ಬೂದಿಯ ಮೇಲೆ ಕುಳಿತುಕೊಂಡು ತಮ್ಮ ದುಃಖವನ್ನು ವ್ಯಕ್ತಪಡಿಸಬೇಕೆಂದು ನಾನು ಆಶಿಸುತ್ತೇನೋ? ನೀವು ಉಪವಾಸದ ದಿವಸಗಳಲ್ಲಿ ಅದನ್ನೇ ಮಾಡುವವರಾಗಿರುತ್ತೀರಿ. ಯೆಹೋವನು ಅದನ್ನೇ ಆಶಿಸುವನೆಂದು ನಂಬುತ್ತೀರೋ?
IRVKN ಮನುಷ್ಯನು ತನ್ನ ಆತ್ಮವನ್ನು ಕುಂದಿಸಿಕೊಳ್ಳುವುದಕ್ಕಾಗಿ ನಾನು ನೇಮಿಸಿದ ಉಪವಾಸದಿನವು ಇಂಥದ್ದೋ,?
ಒಬ್ಬನು ಜೊಂಡಿನಂತೆ ತಲೆಯನ್ನು ಬೊಗ್ಗಿಸಿಕೊಂಡು ಗೋಣಿತಟ್ಟನ್ನೂ ಮತ್ತು ಬೂದಿಯನ್ನೂ ಆಸನಮಾಡಿಕೊಳ್ಳುವುದು
ಯೆಹೋವನಿಗೆ ಸಮರ್ಪಕವಾದ ಉಪವಾಸ ಎನ್ನುತ್ತೀರೋ?