Bible Versions
Bible Books

Joshua 20:9 (GNTWHRP) Westcott-Hort Greek New Testament

Versions

KNV   ಕೈ ತಪ್ಪಿ ಅರಿಯದೆ ಕೊಂದರೆ ಯಾವನಾದರೂ ಸಭೆಯ ಮುಂದೆ ಬಂದು ನಿಲ್ಲುವ ಪರ್ಯಂತರ ರಕ್ತದ ಸೇಡು ತೀರಿಸಿ ಕೊಳ್ಳುವವನ ಕೈಯಿಂದ ಸಾಯದ ಹಾಗೆ ಅಲ್ಲಿ ಓಡಿ ಹೋಗುವದಕ್ಕೆ ಇಸ್ರಾಯೇಲ್‌ ಮಕ್ಕಳೆಲ್ಲರಿಗೂ ಅವರ ಮಧ್ಯದಲ್ಲಿ ವಾಸವಾಗಿರುವ ಪರಕೀಯರಿಗೂ ನೇಮಿಸಲ್ಪಟ್ಟ ಪಟ್ಟಣಗಳು ಇವೇ.
ERVKN   ಇಸ್ರೇಲಿನವನಾಗಲಿ ಅಥವಾ ಅವರೊಂದಿಗೆ ಇರುವ ಒಬ್ಬ ಪರದೇಶಿಯನಾಗಲಿ ಆಕಸ್ಮಿಕವಾಗಿ ನರಹತ್ಯೆ ಮಾಡಿದ್ದರೆ ಒಂದು ಆಶ್ರಯನಗರಕ್ಕೆ ಓಡಿಹೋಗಲು ಅವಕಾಶವಿತ್ತು. ಯಾವನೇ ಆಗಲಿ ಮತ್ತೊಬ್ಬನನ್ನು ಆಕಸ್ಮಿಕವಾಗಿ ಕೊಂದರೆ ಪಟ್ಟಣಗಳಲ್ಲಿ ಆಶ್ರಯ ಪಡೆಯಬಹುದಾಗಿತ್ತು; ಅಲ್ಲಿ ಸುರಕ್ಷಿತವಾಗಿ ವಾಸಿಸಬಹುದಾಗಿತ್ತು. ಬೆನ್ನಟ್ಟಿ ಬಂದವನು ಅವನನ್ನು ಕೊಲ್ಲಲು ಸಾಧ್ಯವಿರಲಿಲ್ಲ. ಕೊಲೆ ಮಾಡಿದವನಿಗೆ ಪಟ್ಟಣದ ನ್ಯಾಯಾಲಯವೇ ತೀರ್ಪು ನೀಡುತ್ತಿತ್ತು.
IRVKN   ಇಸ್ರಾಯೇಲ್ಯರೆಲ್ಲರಿಗೂ ಹಾಗೂ ಅವರ ಮಧ್ಯದಲ್ಲಿ ವಾಸಮಾಡುತ್ತಿದ್ದ ಪರದೇಶಿಗಳಿಗೂ ಇವು ಆಶ್ರಯ ನಗರಗಳಾಗಿ ನೇಮಕ ಆಗಿದ್ದವು. ಬೇರೊಬ್ಬನನ್ನು ಆಕಸ್ಮಾತ್ತಾಗಿ ಕೊಂದವನು ಓಡಿಹೋಗಿ ಹತನಾದವನ ಹತ್ತಿರದ ಬಂಧುವಿನಿಂದ ತಲೆ ತಪ್ಪಿಸಿ ಕೊಳ್ಳಬಹುದು. ಅಲ್ಲದೆ ತಾನು ನ್ಯಾಯ ಸಭೆಯ ಮುಂದೆ ನಿಲ್ಲುವವರೆಗೆ ಅಲ್ಲೇ ಇರಬಹುದಾಗಿದೆ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us