Versions
KNV ಆಗ ಅವನು ಹಾಗೆ ಹೇಳಲಾರದೆ ಸಿಬ್ಬೋಲೆತ್ ಅನ್ನುವನು. ಆಗ ಅವನನ್ನು ಹಿಡಿದು ಯೊರ್ದನಿನ ರೇವುಗಳ ಬಳಿಯಲ್ಲಿ ಕೊಂದುಹಾಕಿದರು. ಹೀಗೆ ಆ ಕಾಲದಲ್ಲಿ ಎಫ್ರಾಯಾಮ್ಯರೊಳಗೆ ನಾಲ್ವತ್ತೆರಡು ಸಾವಿರ ಜನರು ಸತ್ತುಹೋದರು.
ERVKN ಅವರು ಅವನಿಗೆ, “ಷಿಬ್ಬೋಲೆತ್ ಅನ್ನು” ಎಂದು ಹೇಳುವರು. ಎಫ್ರಾಯೀಮಿನ ಜನರಿಗೆ ಆ ಪದವನ್ನು ಸರಿಯಾಗಿ ಉಚ್ಛರಿಸಲು ಬರುತ್ತಿರಲಿಲ್ಲ. ಅವರು ಆ ಪದವನ್ನು ಸಿಬ್ಬೋಲೆತ್” ಎಂದು ಉಚ್ಛರಿಸುತ್ತಿದ್ದರು. ಆ ಮನುಷ್ಯನು “ಸಿಬ್ಬೋಲೆತ್” ಅಂದತಕ್ಷಣ ಗಿಲ್ಯಾದಿನ ಜನರಿಗೆ ಅವನು ಎಫ್ರಾಯೀಮ್ಯನೆಂದು ಗೊತ್ತಾಗುತ್ತಿತ್ತು. ಅವರು ಅವನನ್ನು ದಾರಿಯ ತಿರುವುಗಳಲ್ಲೇ ಕೊಂದುಬಿಡುತ್ತಿದ್ದರು. ಅವರು ಎಫ್ರಾಯೀಮಿನ ನಲವತ್ತೆರಡು ಸಾವಿರ ಜನರನ್ನು ಕೊಂದುಹಾಕಿದರು.
IRVKN ಅವನು ಅಲ್ಲವೆಂದರೆ ಅವನಿಗೆ, “ನೀನು ಷಿಬ್ಬೋಲೆತ್ ಎಂದು ಹೇಳು” ಎಂದು ಹೇಳುವರು. ಹಾಗೆ ಅನ್ನಲಿಕ್ಕೆ ಬಾರದೆ ಅವನು ಸಿಬ್ಬೋಲೆತ್ ಅನ್ನುವನು. ಕೂಡಲೆ ಅವರು ಅವನನ್ನು ಹಿಡಿದು ಯೊರ್ದನಿನ ಹಾಯಗಡಗಳ (ಕಾಲ್ನಡಿಗೆಯಿಂದ ದಾಟಬಹುದಾದ ನಿರುಳ್ಳಸ್ಥಳ) ಬಳಿಯಲ್ಲೇ ಕೊಂದುಹಾಕುವರು. ಹೀಗೆ ಆ ಕಾಲದಲ್ಲಿ ಎಫ್ರಾಯೀಮ್ಯರೊಳಗೆ ನಲ್ವತ್ತೆರಡು ಸಾವಿರ ಜನರು ಹತರಾದರು. PEPS