Versions
KNV ಇದಲ್ಲದೆ ಗಿದ್ಯೋನನು ಎಫ್ರಾಯಾಮ್ ಬೆಟ್ಟ ದಲ್ಲೆಲ್ಲಾ ದೂತರನ್ನು ಕಳುಹಿಸಿ--ನೀವು ಮಿದ್ಯಾನ್ಯರಿಗೆ ಎದುರಾಗಿ ಇಳಿದು ಹೋಗಿ ಬೇತ್ಬಾರ ಮತ್ತು ಯೊರ್ದನ್ ವರೆಗಿರುವ ನೀರುಗಳನ್ನು ಅವರಿಗೆ ಮುಂದಾಗಿ ಹಿಡಿಯಿರಿ ಎಂದು ಹೇಳಿದನು. ಹಾಗೆಯೇ ಎಫ್ರಾಯಾಮ್ ಮನುಷ್ಯರೆಲ್ಲರು ಕೂಡಿಕೊಂಡು ಬೇತ್ಬಾರ ಮತ್ತು ಯೊರ್ದನ್ ವರೆಗೆ ನೀರುಗಳನ್ನು ಹಿಡಿದರು.
ERVKN ಗಿದ್ಯೋನನು ಎಫ್ರಾಯೀಮ್ ಬೆಟ್ಟಪ್ರದೇಶಗಳಿಗೆ ದೂತರನ್ನು ಕಳುಹಿಸಿದನು. ಆ ದೂತರು, “ಬನ್ನಿ, ಮಿದ್ಯಾನ್ಯರ ಮೇಲೆ ಧಾಳಿ ಮಾಡಿರಿ. ಬೇತ್ಬಾರದವರೆಗಿನ ನದಿಯ ಮತ್ತು ಜೋರ್ಡನ್ ನದಿಯ ಪ್ರದೇಶವನ್ನು ಹಿಡಿದುಕೊಳ್ಳಿರಿ. ಮಿದ್ಯಾನ್ಯರು ಅಲ್ಲಿಗೆ ಬರುವ ಮೊದಲೇ ಈ ಕೆಲಸವನ್ನು ಮಾಡಿರಿ” ಎಂದು ತಿಳಿಸಿದರು. ಅವರು ಎಫ್ರಾಯೀಮ್ ಕುಲದ ಎಲ್ಲ ಜನರನ್ನು ಕರೆದರು. ಅವರು ಬೇತ್ಬಾರಾದವರೆಗೆ ನದಿಯ ಪ್ರದೇಶವನ್ನು ಹಿಡಿದುಕೊಂಡರು.
IRVKN ಇದಲ್ಲದೆ ಗಿದ್ಯೋನನು ಎಫ್ರಾಯೀಮ್ ಪರ್ವತಪ್ರದೇಶಗಳಿಗೆ ದೂತರನ್ನು ಕಳುಹಿಸಿ ಅಲ್ಲಿನವರಿಗೆ, “ನೀವು ಮಿದ್ಯಾನ್ಯರಿಗೆ ವಿರೋಧವಾಗಿ ಹೊರಟು ಬೇತ್ಬಾರದವರೆಗಿರುವ ಪ್ರವಾಹಗಳನ್ನೂ ಯೊರ್ದನ್ ಹೊಳೆಯನ್ನೂ ವಶಪಡಿಸಿಕೊಳ್ಳಿರಿ” ಎಂದು ಹೇಳಿಕಳುಹಿಸಿದನು. ಆಗ ಎಫ್ರಾಯೀಮ್ಯರೆಲ್ಲರೂ ಒಟ್ಟಾಗಿ ಬೇತ್ಬಾರದವರೆಗಿರುವ ಪ್ರವಾಹಗಳಿಗೂ ಬಂದು ಅವುಗಳ ಹಾಯಗಡಗಳನ್ನೆಲ್ಲಾ ಮತ್ತು ಯೊರ್ದನ್ ಹೊಳೆಯನ್ನೂ ಹಿಡಿದರು.