Versions
KNV ಅವಳ ಬಾಗಿಲುಗಳು ನೆಲದೊಳಗೆ ಹೂತುಕೊಂಡಿವೆ; ಆತನು ಆಕೆಯ ಅಗುಳಿಗಳನ್ನು ಮುರಿದು ಹಾಳು ಮಾಡಿದ್ದಾನೆ. ಅವಳ ಅರಸನು ಮತ್ತು ಪ್ರಭುಗಳು ಅನ್ಯಜನಾಂಗಗಳ ಮಧ್ಯೆ ಇರುವರು; ಇನ್ನು ನ್ಯಾಯ ಪ್ರಮಾಣವು ಇರುವದೇ ಇಲ್ಲ; ಆಕೆಯ ಪ್ರವಾದಿಗಳು ಸಹ ಕರ್ತನಿಂದ ದರ್ಶನವನ್ನು ಕಂಡು ಕೊಳ್ಳುವದಿಲ್ಲ.
ERVKN ಜೆರುಸಲೇಮಿನ ಹೆಬ್ಬಾಗಿಲುಗಳು ನೆಲದಲ್ಲಿ ಹೂತು ಹೋಗಿವೆ. ಆತನು ಹೆಬ್ಬಾಗಿಲುಗಳ ಅಗುಳಿಗಳನ್ನು ಮುರಿದು ಚೂರಚೂರು ಮಾಡಿದ್ದಾನೆ. ಅವಳ ರಾಜನು ಮತ್ತು ರಾಜಕುಮಾರರು ಅನ್ಯಜನಾಂಗಗಳ ಮಧ್ಯದಲ್ಲಿದ್ದಾರೆ. ಆ ಜನರಿಗೆ ಉಪದೇಶ ಮಾಡಲು ಯಾರೂ ಇಲ್ಲ. ಪ್ರವಾದಿಗಳಿಗೆ ಯೆಹೋವನಿಂದ ಯಾವ ದರ್ಶನಗಳೂ ಇಲ್ಲ.
IRVKN ಚೀಯೋನಿನ ಹೆಬ್ಬಾಗಿಲುಗಳು ನೆಲದಲ್ಲಿ ಹೂತುಕೊಂಡಿವೆ; ಅದರ ಅಗುಳಿಗಳನ್ನು ಮುರಿದು ಚೂರು ಚೂರು ಮಾಡಿದ್ದಾನೆ;
ಅದರ ಅರಸನೂ ಮತ್ತು ಸರದಾರರೂ ಮೋಶೆಯ ಧರ್ಮೋಪದೇಶವನ್ನು ಬೋಧಿಸದ ಅನ್ಯಜನಾಂಗಗಳೊಳಗೆ ಸೇರಿಕೊಂಡಿದ್ದಾರೆ;
ಅದರ ಪ್ರವಾದಿಗಳಿಗೆ ಯೆಹೋವನಿಂದ ಯಾವ ದರ್ಶನವೂ ಇಲ್ಲ.