Versions
KNV ಅಲ್ಲಿಂದ ಆತನು ಎದ್ದು ಯೊರ್ದನಿಗೆ ಆಚೆ ಕಡೆಗಿರುವ ಯೂದಾಯದ ಮೇರೆ ಗಳಿಗೆ ಬಂದನು; ಜನರು ತಿರಿಗಿ ಆತನ ಬಳಿಗೆ ಕೂಡಿ ಬರಲು ಆತನು ತನ್ನ ವಾಡಿಕೆಯಂತೆ ಅವರಿಗೆ ಮತ್ತೆ ಬೋಧಿಸಿದನು.
ERVKN ನಂತರ ಯೇಸು ಆ ಸ್ಥಳವನ್ನು ಬಿಟ್ಟು ಜುದೇಯ ಪ್ರಾಂತ್ಯಕ್ಕೆ ಹಾಗೂ ಜೋರ್ಡನ್ ನದಿಯ ಆಚೆದಡಕ್ಕೆ ಹೋದನು. ಅನೇಕ ಜನರು ಮತ್ತೆ ಆತನ ಬಳಿಗೆ ಬಂದರು. ಯೇಸು ಎಂದಿನಂತೆ ಆ ಜನರಿಗೆ ಉಪದೇಶಿಸಿದನು.
IRVKN {ವಿವಾಹ ವಿಚ್ಛೇದನ} (ಮತ್ತಾ 19:1-9; ಲೂಕ 16:18) PS ಯೇಸು ಅಲ್ಲಿಂದ ಹೊರಟು ಯೂದಾಯ ಪ್ರಾಂತ್ಯಕ್ಕೂ ಯೊರ್ದನ್ ಹೊಳೆಯ ಆಚೆಯ ಸೀಮೆಗೂ ಬಂದನು. ಅಲ್ಲಿ ಜನರು ತಿರುಗಿ ಗುಂಪುಗುಂಪಾಗಿ ಆತನ ಬಳಿಗೆ ಕೂಡಿ ಬರಲು ಆತನು ತಿರುಗಿ ಎಂದಿನಂತೆ ಅವರಿಗೆ ಉಪದೇಶಮಾಡುತ್ತಿದ್ದನು.