Versions
KNV ಆಗ ನಾನು ಅವರಿಗೆ ಹೇಳಿದೆನು--ನಮಗೆ ಇರುವ ಕೇಡನ್ನು ನೀವು ನೋಡುತ್ತೀರಿ. ಯೆರೂಸಲೇಮು ಹಾಳಾಗಿ ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟವಲ್ಲಾ ನಾವು ಇನ್ನು ಮೇಲೆ ನಿಂದೆಗೊಳಗಾಗಿರದ ಹಾಗೆ ಯೆರೂಸಲೇಮಿನ ಗೋಡೆಯನ್ನು ಕಟ್ಟುವ ಬನ್ನಿರಿ.
ERVKN ಆಮೇಲೆ ನಾನು ಎಲ್ಲಾ ಜನರಿಗೆ, “ನಮ್ಮ ದುರವಸ್ಥೆಯನ್ನು ನೀವು ನೋಡುತ್ತಿದ್ದೀರಿ. ಜೆರುಸಲೇಮ್ ಒಂದು ಹಾಳು ದಿಬ್ಬವಾಗಿದೆ; ಅದರ ಬಾಗಿಲುಗಳು ಸುಟ್ಟು ಬೂದಿಯಾಗಿವೆ. ಬನ್ನಿರಿ, ನಾವು ಜೆರುಸಲೇಮಿನ ಪೌಳಿಗೋಡೆಗಳನ್ನು ತಿರುಗಿ ಕಟ್ಟೋಣ. ಆಗ ನಾವು ಇನ್ನೆಂದಿಗೂ ನಾಚಿಕೆಗೆ ಗುರಿಯಾಗುವುದಿಲ್ಲ” ಎಂದು ಹೇಳಿದೆನು.
IRVKN ನಾನು ಅವರಿಗೆ, “ನಮ್ಮ ದುರಾವಸ್ಥೆ ನಿಮ್ಮ ಕಣ್ಣ ಮುಂದಿರುತ್ತದಲ್ಲವೇ; ಯೆರೂಸಲೇಮ್ ಪಟ್ಟಣವು ಹಾಳು ಬಿದ್ದಿದೆ, ಅದರ ಬಾಗಿಲುಗಳು ಬೆಂಕಿಯಿಂದ ಸುಡಲ್ಪಟ್ಟಿರುತ್ತವೆ; ಬನ್ನಿರಿ, ಯೆರೂಸಲೇಮಿನ ಗೋಡೆಯನ್ನು ಕಟ್ಟೋಣ. ಹೀಗೆ ಮಾಡಿದರೆ ನಮ್ಮ ಮೇಲಣ ನಿಂದೆಯು ಅಳಿಸಿ ಹೋಗುವುದು” ಎಂದು ಹೇಳಿದೆನು.