Bible Versions
Bible Books

Zechariah 10:3 (GNTWHRP) Westcott-Hort Greek New Testament

Versions

KNV   ಕುರುಬರಿಗೆ ವಿರೋಧವಾಗಿ ನನ್ನ ಕೋಪವು ಉರಿಯಿತು; ಮೇಕೆಗಳನ್ನು ದಂಡಿಸಿದೆನು; ಸೈನ್ಯಗಳ ಕರ್ತನು ತನ್ನ ಮಂದೆಯಾಗಿರುವ ಯೆಹೂದನ ಮನೆ ತನದವರನ್ನು ದರ್ಶಿಸಿ ಅವರನ್ನು ಯುದ್ಧದಲ್ಲಿ ತನ್ನ ಘನವಾದ ಕುದುರೆಯ ಹಾಗೆ ಮಾಡಿದ್ದಾನೆ.
ERVKN   ಯೆಹೋವನು ಹೇಳುವದೇನೆಂದರೆ, “ನಾನು ಕುರುಬರ ಮೇಲೆ ಬಹಳವಾಗಿ ಕೋಪಿಸಿರುವೆನು. ನಾಯಕರನ್ನು ನಾನು ನನ್ನ ಜನರ ಮೇಲೆ ಜವಾಬ್ದಾರರನ್ನಾಗಿ ಮಾಡಿದ್ದೇನೆ.” ಯೆಹೂದದ ಜನರು ದೇವರ ಮಂದೆಯಾಗಿದ್ದಾರೆ. ಹೇಗೆ ಸಿಪಾಯಿಯು ತನ್ನ ಯುದ್ಧದ ಕುದುರೆಯನ್ನು ಪರಾಂಬರಿತ್ತಾನೋ ಹಾಗೆ ಸರ್ವಶಕ್ತನಾದ ಯೆಹೋವನು ತನ್ನ ಮಂದೆಯನ್ನು ನಿಜವಾಗಿಯೂ ಪರಾಂಬರಿಸುತ್ತಾನೆ.
IRVKN   {ಇಸ್ರಾಯೇಲಿನ ನೂತನ ಬಲ} PS ನನ್ನ ಕೋಪವು ಕುರುಬರ ಮೇಲೆ ಧಗಧಗಿಸುತ್ತದೆ. ನಾನು ಹೋತಗಳನ್ನು * ಹೋತಗಳನ್ನುನಾಯಕರನ್ನು. ದಂಡಿಸುವೆನು; ಸೇನಾಧೀಶ್ವರ ಯೆಹೋವನು ತನ್ನ ಮಂದೆಯಾದ ಯೆಹೂದ ವಂಶವನ್ನು ಪರಾಂಬರಿಸಿ ಘನವಾದ ಯುದ್ಧಾಶ್ವವನ್ನಾಗಿ ಮಾಡಿಕೊಳ್ಳುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us