Versions
KNV ಅರಸ ನಾದ ದಾವೀದನ ಕ್ಷೇಮ ಸಮಾಚಾರವನ್ನು ವಿಚಾರಿ ಸಲೂ ಹದರೆಜರನ ಸಂಗಡ ಯುದ್ಧ ಮಾಡಿ ಅವನನ್ನು ಹೊಡೆದದ್ದಕ್ಕೋಸ್ಕರ ಅವನನ್ನು ಆಶೀರ್ವದಿಸಲೂ ತೋವನು ತನ್ನ ಕುಮಾರನಾದ ಹದೋರಾಮನನ್ನು ಎಲ್ಲಾ ತರವಾದ ಬೆಳ್ಳಿ ಬಂಗಾರ ತಾಮ್ರದ ಪಾತ್ರೆಗಳು ಸಹಿತವಾಗಿ ಅವನ ಬಳಿಗೆ ಕಳುಹಿಸಿದನು.
ERVKN ತನ್ನ ಮಗನಾದ ಹದೋರಾಮನನ್ನು ದಾವೀದನ ಬಳಿಗೆ ಸಮಾಧಾನಕ್ಕಾಗಿಯೂ ಆಶೀರ್ವದಿಸುವುದಕ್ಕಾಗಿಯೂ ಕಳುಹಿಸಿದನು; ಯಾಕಂದರೆ ದಾವೀದನು ಹದದೆಜರನ ವಿರುದ್ಧ ಹೋರಾಡಿ ಅವನನ್ನು ಸೋಲಿಸಿದ್ದನು. ಹದದೆಜರನು ತೋವನೊಂದಿಗೆ ಯುದ್ಧ ಮಾಡಿದ್ದನು. ಹದೋರಾಮನು ಬೆಳ್ಳಿಬಂಗಾರಗಳ ಮತ್ತು ತಾಮ್ರಗಳ ವಸ್ತುಗಳನ್ನು ದಾವೀದನಿಗೆ ಕೊಟ್ಟನು.
IRVKN ತೋವಿಗೂ ಹದರೆಜನಿಗೂ ವಿರೋಧವಿತ್ತು. ದಾವೀದನು ಹದದೆಜರನ ವಿರುದ್ಧ ಹೋರಾಡಿ ಅವನನ್ನು ಸೋಲಿಸಿದ್ದರಿಂದ, ತೋವು ದಾವೀದನನ್ನು ವಂದಿಸುವುದಕ್ಕೂ, ಹಾರೈಸುವುದಕ್ಕೂ ತನ್ನ ಮಗನಾದ ಹದೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೋಸ್ಕರ ವಿಧವಿಧವಾದ ತಾಮ್ರ, ಬೆಳ್ಳಿ, ಬಂಗಾರಗಳ ಪಾತ್ರೆಗಳನ್ನು ತಂದನು.