Versions
KNV ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು ಅವುಗಳನ್ನು ತುಂಡು ತುಂಡಾಗಿ ಕತ್ತರಿಸಿ ದೂತರ ಕೈಯಿಂದ ಇಸ್ರಾಯೇಲಿನ ಮೇರೆಗಳಿಗೆಲ್ಲಾ ಕಳುಹಿಸಿಸೌಲನ ಹಿಂದೆಯೂ ಸಮುವೇಲನ ಹಿಂದೆಯೂ ಹೊರಡದವನ ಪಶುಗಳಿಗೆ ಈ ಪ್ರಕಾರ ಮಾಡಲ್ಪಡು ವದೆಂದು ಹೇಳಿಸಿದನು. ಆಗ ಕರ್ತನಿಂದ ಉಂಟಾದ ಭಯ ಜನರ ಮೇಲೆ ಬಿದ್ದದ್ದರಿಂದ ಅವರು ಒಂದೇ ಮನಸ್ಸಿನಿಂದ ಹಾಗೆಯೇ ಹೊರಟು ಬಂದರು.
ERVKN ಸೌಲನು ಒಂದು ಜೊತೆ ಹಸುಗಳನ್ನು ತೆಗೆದುಕೊಂಡು ಅವುಗಳನ್ನು ತುಂಡುತುಂಡಾಗಿ ಕತ್ತರಿಸಿ ಆ ತುಂಡುಗಳನ್ನು ಸಂದೇಶಕರಿಗೆ ಕೊಟ್ಟನು. “ಇಸ್ರೇಲಿನ ನಾಡಿನಲ್ಲೆಲ್ಲಾ ಈ ತುಂಡುಗಳನ್ನು ತೆಗೆದುಕೊಂಡು ಹೋಗಿ ಅವರಿಗೆ, ‘ಸೌಲನನ್ನೂ ಮತ್ತು ಸಮುವೇಲನನ್ನೂ ಹಿಂಬಾಲಿಸಿರಿ, ಸೌಲನನ್ನು ಮತ್ತು ಸಮುವೇಲನನ್ನು ಯಾರು ಹಿಂಬಾಲಿಸುವುದಿಲ್ಲವೋ, ಯಾರು ಅವರಿಗೆ ಸಹಾಯ ಮಾಡುವುದಿಲ್ಲವೋ ಅಂತಹವರ ಹಸುಗಳಿಗೂ ಇದೇ ಗತಿಯಾಗುತ್ತದೆ’ ಎಂದು ತಿಳಿಸಿರಿ” ಎಂದನು. ಯೆಹೋವನ ಮೇಲೆ ಜನರಲ್ಲಿ ಹೆಚ್ಚು ಭಯವುಂಟಾಯಿತು. ಅವರೆಲ್ಲಾ ಒಂದೇ ಮನಸ್ಸಿನಿಂದ ಒಟ್ಟಾಗಿ ಸೇರಿ ಬಂದರು.
IRVKN ಆ ತುಂಡುಗಳನ್ನು ದೂತರ ಮುಖಾಂತರ ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಿಗೆ ಕಳುಹಿಸಿ, “ಯಾರು ಸೌಲ, ಸಮುವೇಲರನ್ನು ಹಿಂಬಾಲಿಸುವುದಿಲ್ಲವೋ ಅವರ ಎತ್ತುಗಳು ಹೀಗೆಯೇ ಕಡಿಯಲ್ಪಡುವವು” ಎಂದು ಹೇಳಿ ಕಳುಹಿಸಿದನು. ಯೆಹೋವನಿಗೆ ಭಯಪಟ್ಟು ಜನರೆಲ್ಲರೂ ಏಕಮನಸ್ಸಿನಿಂದ ಬೆಜೆಕಿನಲ್ಲಿ ಕೂಡಿಬಂದರು.