Versions
KNV ಅದಕ್ಕೆ ಎಲೀಯನು ಐವತ್ತು ಮಂದಿಯ ಪ್ರಧಾನನಿಗೆ ಪ್ರತ್ಯುತ್ತರವಾಗಿ--ನಾನು ದೇವರ ಮನುಷ್ಯನಾಗಿದ್ದರೆ ಬೆಂಕಿಯು ಆಕಾಶದಿಂದ ಇಳಿದು ನಿನ್ನನ್ನೂ ನಿನ್ನ ಐವತ್ತು ಮಂದಿಯನ್ನೂ ದಹಿಸಿಬಿಡಲಿ ಅಂದನು. ತಕ್ಷಣವೇ ಬೆಂಕಿಯು ಆಕಾಶದಿಂದ ಇಳಿದು ಅವನನ್ನೂ ಅವನ ಐವತ್ತು ಮಂದಿಯನ್ನೂ ದಹಿಸಿಬಿಟ್ಟಿತು.
ERVKN ಎಲೀಯನು ಐವತ್ತು ಮಂದಿಯ ಸೇನಾಧಿಪತಿಗೆ, “ನಾನು ಒಬ್ಬ ದೇವಮನುಷ್ಯನಾಗಿರುವದಾದರೆ ಪರಲೋಕದಿಂದ ಬೆಂಕಿಯು ಕೆಳಗಿಳಿದು ಬಂದು ನಿನ್ನನ್ನೂ ನಿನ್ನ ಐವತ್ತು ಸೈನಿಕರನ್ನೂ ನಾಶಗೊಳಿಸಲಿ!” ಎಂದು ಉತ್ತರಿಸಿದನು. ಆಗ ಬೆಂಕಿಯು ಪರಲೋಕದಿಂದ ಬಂದು ಆ ಸೇನಾಧಿಪತಿಯನ್ನು ಮತ್ತು ಅವನ ಐವತ್ತು ಮಂದಿ ಸೈನಿಕರನ್ನು ನಾಶಗೊಳಿಸಿತು.
IRVKN ಅದಕ್ಕೆ ಎಲೀಯನು ಪಂಚದಶಾಧಿಪತಿಗೆ, “ನಾನು ದೇವರ ಮನುಷ್ಯನಾಗಿರುವುದಾದರೆ ಆಕಾಶದಿಂದ ಬೆಂಕಿಬಿದ್ದು ನಿನ್ನನ್ನೂ ನಿನ್ನ ಐವತ್ತು ಮಂದಿ ಸಿಪಾಯಿಗಳನ್ನೂ ದಹಿಸಿಬಿಡಲಿ” ಎಂದನು. ಕೂಡಲೆ ಆಕಾಶದಿಂದ ಬೆಂಕಿ ಬಿದ್ದು ಅವನನ್ನೂ, ಅವನ ಸಿಪಾಯಿಗಳನ್ನೂ ದಹಿಸಿಬಿಟ್ಟಿತು. PEPS