Versions
KNV ಆಗ ನಾನು--ಇವರು ಏನು ಮಾಡುವದಕ್ಕೆ ಬರುತ್ತಾರೆ ಅಂದೆನು. ಅದಕ್ಕೆ ಆತನು ಮಾತನಾಡಿ ಹೇಳಿದ್ದೇನಂದರೆ--ಯಾವನಾದರೂ ತಲೆಯನ್ನು ಎತ್ತದ ಹಾಗೆ ಯೆಹೂದವನ್ನು ಚದರಿಸಿದ ಕೊಂಬುಗಳು. ಆದರೆ ಇವರು ಅವರನ್ನು ಹೆದರಿಸಿ ಯೆಹೂದ ದೇಶದ ಮೇಲೆ ಅದನ್ನು ಚದರಿಸುವದಕ್ಕೆ ಕೊಂಬನ್ನು ಎತ್ತಿದ ಅನ್ಯಜನಾಂಗಗಳ ಕೊಂಬುಗಳನ್ನು ಕೆಳಗೆ ಹಾಕುವದಕ್ಕೆ ಬಂದಿದ್ದಾರೆ ಅಂದನು.
ERVKN “ಯಾವ ಕೆಲಸಕ್ಕಾಗಿ ಈ ಕೆಲಸಗಾರರು ಬರುತ್ತಿದ್ದಾರೆ?” ಎಂದು ನಾನು ವಿಚಾರಿಸಿದೆನು. ಅದಕ್ಕಾತನು, “ಯೆಹೂದದ ಜನರನ್ನು ವಿದೇಶಗಳಲ್ಲಿ ಚದರಿ ಹೋಗುವಂತೆ ಮಾಡಿದ ಜನಾಂಗಗಳನ್ನು ಈ ಕೊಂಬುಗಳು ಸೂಚಿಸುತ್ತವೆ. ಈ ಕೊಂಬುಗಳು ಯೆಹೂದದ ಜನರನ್ನು ಎತ್ತಿ ಪರದೇಶಗಳಿಗೆ ಬಿಸಾಡಿದವು. ಈ ಕೊಂಬುಗಳು ಯಾರಿಗೂ ದಯೆ ತೋರಿಸಲಿಲ್ಲ. ಆದರೆ ಈ ನಾಲ್ಕು ಮಂದಿ ಕೆಲಸಗಾರರು ಆ ಕೊಂಬುಗಳಿಗೆ ಭಯಪಡಿಸಿ ಅವುಗಳನ್ನು ಎತ್ತಿ ಬಿಸಾಡಿ ಬಿಡಲು ಬಂದಿದ್ದಾರೆ” ಎಂದು ಹೇಳಿದನು.
IRVKN ಆಗ ನಾನು, “ಇವರು ಏನು ಮಾಡುವುದಕ್ಕೆ ಬಂದಿದ್ದಾರೆ?” ಎಂದು ಕೇಳಲು ಅವನು, “ಈ ಕೊಂಬುಗಳು ಯೆಹೂದದವರಲ್ಲಿ ಯಾರೂ ತಲೆಯೆತ್ತದಂತೆ ಅವರನ್ನು ಚದುರಿಸಿವೆಯಷ್ಟೆ; ಇವರಾದರೋ ಯೆಹೂದ ದೇಶದವರನ್ನು ಚದುರಿಸಬೇಕೆಂದು ತಲೆಯೆತ್ತಿದ ಜನಾಂಗಗಳ ಕೊಂಬುಗಳನ್ನು ಹೆದರಿಸಿ ಕೆಡವುವುದಕ್ಕೆ ಬಂದಿದ್ದಾರೆ” ಎಂದು ಹೇಳಿದನು. PE