Versions
KNV ಆ ಮಾರ್ಗದ ವಿಷಯವಾಗಿ ಚೆನ್ನಾಗಿ ತಿಳಿದು ಕೊಂಡಿದ್ದ ಫೇಲಿಕ್ಸನು ಇವುಗಳನ್ನು ಕೇಳಿ ವಿಷಯವನ್ನು ಮುಂದಕ್ಕೆ ಹಾಕಿಸಿ--ಮುಖ್ಯನಾಯಕನಾದ ಲೂಸ್ಯನು ಬಂದಾಗ ನಿಮ್ಮ ವಿಷಯವನ್ನು ಸಂಪೂರ್ಣವಾಗಿ ವಿಚಾರಣೆ ಮಾಡುತ್ತೇನೆ ಎಂದು ಹೇಳಿದನು.
ERVKN ಫೇಲಿಕ್ಸನು ಯೇಸುವಿನ ಮಾರ್ಗದ ಬಗ್ಗೆ ಮೊದಲೇ ಸಾಕಷ್ಟು ಅರ್ಥಮಾಡಿಕೊಂಡಿದ್ದನು. ಅವನು ವಿಚಾರಣೆಯನ್ನು ನಿಲ್ಲಿಸಿ, “ಸೇನಾಧಿಪತಿಯಾದ ಲೂಸಿಯನು ಇಲ್ಲಿಗೆ ಬಂದಾಗ, ಈ ಸಂಗತಿಗಳ ಬಗ್ಗೆ ನಾನು ತೀರ್ಪನ್ನು ಕೊಡುತ್ತೇನೆ” ಎಂದು ಹೇಳಿದನು.
IRVKN ಫೇಲಿಕ್ಸನು ಈ ಮಾರ್ಗವನ್ನು, ತಕ್ಕ ಮಟ್ಟಿಗೆ ತಿಳಿದವನಾಗಿದ್ದರೂ ಅವರಿಗೆ; “ಸಹಸ್ರಾಧಿಪತಿಯಾದ ಲೂಸ್ಯನು ಬಂದ ಮೇಲೆ ನಿನ್ನ ಪ್ರಕರಣವನ್ನು ತೀರ್ಮಾನಿಸುತ್ತೇನೆಂದು” ಹೇಳಿ, ವಿಚಾರಣೆಯನ್ನು ತಡೆಮಾಡಿದನು.